Tuesday, November 26, 2024
Tuesday, November 26, 2024

ವಿಕಲಚೇತನರ ಸಪ್ತಾಹ ಉದ್ಘಾಟನೆ

ವಿಕಲಚೇತನರ ಸಪ್ತಾಹ ಉದ್ಘಾಟನೆ

Date:

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಮತ್ತು ವಿಕಲಚೇತನರ ಗ್ರಾಮೀಣ ಹಾಗೂ ನಗರ ಪುನರ್ವಸತಿ ಯೋಜನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವು ಸೋಮವಾರ ನಗರದ ಬನ್ನಂಜೆ ಬಾಲಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅನುರಾಧ ಹಾದಿಮನೆ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾದ ನಿರಂಜನ ಭಟ್ 21 ಬಗೆಯ ವಿಕಲತೆ ಬಗ್ಗೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ ರಾವ್ ವಿಕಲತೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ತಾಲೂಕು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಧುಸೂದನ್ ರಾವ್, ಉಡುಪಿ ಮತ್ತು ಕಾಪು ತಾಲೂಕಿನ ಆಶಾ ಸುಗಮಕಾರರು, ಅಂಗನವಾಡಿ ಮೇಲ್ವಿಚಾರಕರು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅಧ್ಯಾಪಕರು, ಗ್ರಾಮೀಣ ಪುನರ್ವಸತಿ ಮತ್ತು ನಗರ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳು, ರೆಡ್ ಕ್ರಾಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಸಂಘಟನೆಗಳೊಂದಿಗೆ ಗ್ರಾಮ ಪಂಚಾಯತ್ ಶಿರೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಸಮುದಾಯ ಆರೋಗ್ಯ ಕೇಂದ್ರ, ಬ್ರಹ್ಮಾವರ, ತಾಲೂಕು ಪಂಚಾಯತ್ ಕಾರ್ಕಳ, ಜೂನಿಯರ್ ಕಾಲೇಜು ಕುಂದಾಪುರ, ಭಾರತೀಯ ರೆಡ್ ಕ್ರಾಸ್ ಉಡುಪಿ ಇಲ್ಲಿ ಒಂದು ವಾರಗಳ ಕಾಲ ಕಾರ್ಯಕ್ರಮ ನಡೆಯಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

ಬೆಳ್ಮಣ್, ನ.26: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!