Sunday, February 2, 2025
Sunday, February 2, 2025

ಕಾಪು ಸ.ಪ್ರ.ದ.ಕಾಲೇಜು: ವಿದ್ಯಾರ್ಥಿ ವೇದಿಕೆ ಉದ್ಘಾಟನೆ

ಕಾಪು ಸ.ಪ್ರ.ದ.ಕಾಲೇಜು: ವಿದ್ಯಾರ್ಥಿ ವೇದಿಕೆ ಉದ್ಘಾಟನೆ

Date:

ಕಾಪು, ನ.27: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇದರ 2024-25ನೇ ಸಾಲಿನ ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಮತ್ತು ಪ್ರತಿಭಾ ದಿನಾಚರಣೆ ಹಾಗೂ ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಆರ್‌ ಮೆಂಡನ್‌ ದೀಪ ಬೆಳಗಿಸಿ ಉದ್ಘಾಟಿಸಿ, ಕಾಲೇಜು ಬೆಳೆದು ಬಂದ ಬಗೆಯನ್ನು ಸವಿಸ್ತಾರವಾಗಿ ವಿವರಿಸಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಬಳಸಿಕೊಂಡು ಕಾಲೇಜಿಗೆ ಕೀರ್ತಿ ತರುವಂತೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾಲೇಜಿನ ವಾರ್ಷಿಕ ಸಂಚಿಕೆ ‘ಹೊಂಬೆಳಕು’ ಬಿಡುಗಡೆ ಮಾಡಿ ಮಾತನಾಡಿದ ಪ್ರೊ. ಬಾಲಕೃಷ್ಣ ಶೆಟ್ಟಿ, ವಿಶ್ರಾಂತ ಪ್ರಾಂಶುಪಾಲರು ಕಟೀಲು ಇವರು ವಿದ್ಯಾರ್ಥಿಗಳ ಜವಾಬ್ದಾರಿಯ ಮತ್ತು ಬೆಳವಣಿಗೆಯ ಬಗ್ಗೆ ಅನುಭವದ ಮಾತುಗಳನ್ನಾಡಿದರು, ಹಾಗೂ ವಿದ್ಯಾರ್ಥಿ ಸಮುದಾಯ ಇಂದು ಡ್ರಗ್ಸ್‌ ಹಾವಳಿಯ ಬಗ್ಗೆ ಇರಬೇಕಾದ ಎಚ್ಚರವನ್ನು ಒತ್ತಿ ಹೇಳಿದರು ಹಾಗೂ ಹೊಂಬೆಳಕು ವಾರ್ಷಿಕ ಸಂಚಿಕೆಯ ಮಹತ್ವವನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿ ನಾಗೇಶ್‌ ಸದಸ್ಯರು ಪುರಸಭೆ ಕಾಪು ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್‌ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ನಯನ ಎಲ್‌ ಎಮ್‌ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ‘ಹೊಂಬೆಳಕು’ ಸಂಚಿಕೆಯ ಸಂಪಾದಕರಾದ ದೀಪಿಕಾ ಸುವರ್ಣ ವಾರ್ಷಿಕ ಸಂಚಿಕೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಗೌರವ್‌ ಮತ್ತು ದಿಶಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ನವಮಿ ಸ್ವಾಗತಿಸಿ, ಕವಿತಾ ವಂದಿಸಿದರು. ರಿಷಿಕಾ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಅಶ್ವಿತಾ ಎನ್‌ ಕರ್ಕೇರ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಅವಧಿ ಮುಗಿದಿರುವ ಬ್ಯಾನರ್ /ಕಟೌಟ್‌ಗಳ ತೆರವಿಗೆ ಸೂಚನೆ

ಉಡುಪಿ, ಫೆ.1: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಖಾಯಂ ಜಾಹೀರಾತು ಫಲಕಗಳಲ್ಲಿ...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್: ಯಶ್ಪಾಲ್ ಸುವರ್ಣ

ಉಡುಪಿ, ಫೆ.1: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ...

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್

ಈ ಬಾರಿಯ ಕೇಂದ್ರ ಸರ್ಕಾರ ಮಂಡಿಸಿದ ಆಯ ವ್ಯಯ ಲೆಕ್ಕಾಚಾರ ಬಹುಮುಖ್ಯವಾಗಿ...

ಬಜೆಟ್ ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ: ಉಡುಪಿ ಬ್ಲಾಕ್ ಕಾಂಗ್ರೆಸ್

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ...
error: Content is protected !!