Tuesday, January 21, 2025
Tuesday, January 21, 2025

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

Date:

ಉಡುಪಿ, ನ.27: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾದವರರಿಗೆ 1500 ರೂ. ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ವೆಂದು ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿರುತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆಯನ್ನು ಪ್ರತೀ ತಿಂಗಳು 25 ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಪ್ರತೀ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್ ಸಂದೇಶ ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://sevasindhugs.karnataka.gov.in ಅನ್ನು ಹಾಗೂ ಯುವನಿಧಿ ಯೋಜನೆಯ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ: 18005999918 ಅಥವಾ 18005997154 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!