Monday, January 20, 2025
Monday, January 20, 2025

ಅಂಚೆ ಜನಸಂಪರ್ಕ ಅಭಿಯಾನ

ಅಂಚೆ ಜನಸಂಪರ್ಕ ಅಭಿಯಾನ

Date:

ಉಡುಪಿ, ನ.28: ಭಾರತೀಯ ಅಂಚೆ ಇಲಾಖೆಯ ಉಡುಪಿ ವಿಭಾಗದ ವತಿಯಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಇವರ ಸಹಯೋಗದಲ್ಲಿ ಉಡುಪಿಯ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಡಾಕ್-ಸೇವಾ; ಜನ್-ಸೇವಾ-ಅಂಚೆ ಜನ ಸಂಪರ್ಕ ಅಭಿಯಾನ’ ನಡೆಯಿತು. ಅಭಿಯಾನವನ್ನು ದೀಪ ಬೆಳಗಿಸಿ ಉಧ್ಘಾಟಿಸಿ, ಚಾಲನೆ ನೀಡಿದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಂಚೆ ಆಧಾರ್ ಕ್ಯಾಂಪ್ ನಲ್ಲಿ ಆಧಾರ್ ಕಾರ್ಡ್ ಮಾಡಿಸಿದ ಪ್ರಥಮ ನಾಗರಿಕ ತಾನಾಗಿದ್ದು, ಎಲ್ಲಾ ಕಡೆಗಳಲ್ಲಿ ಈ ರೀತಿಯ ಅಭಿಯಾನಗಳನ್ನು ನಡೆಸಿ, ಜನರಿಗೆ ನೆರವಾಗುತ್ತಿರುವ ಉಡುಪಿ ಅಂಚೆ ವಿಭಾಗವನ್ನು ಶ್ಲಾಘಿಸಿದರು. ಅಭಿಯಾನದ ನೇತೃತ್ವ ವಹಿಸಿದ್ದ ಉಡುಪಿ ದಕ್ಷಿಣ ಉಪ ಅಂಚೆ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಪ್ರಸ್ತಾವನೆಗೈದು, ವಿವಿಧ ಅಂಚೆ ಸೇವೆಗಳ ಮಾಹಿತಿ ನೀಡಿದರು. ಅಂಚೆ ಅಧೀಕ್ಷಕ ರಮೇಶ್ ಪ್ರಭು ಉಪಸ್ಥಿತರಿದ್ದು, ಆಯೋಜಕರ ಇಂತಹ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರಲ್ಲದೇ, ಸ್ಥಳಾವಕಾಶಕ್ಕಾಗಿ ಶಾಲಾ ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದರು. ನೂರಾರು ಗ್ರಾಹಕರು-ಪೋಷಕರು- ಶಾಲಾ ಮಕ್ಕಳು ಒಂದೇ ಸೂರಿನಡಿ ಹಲವಾರು ಅಂಚೆ ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!