Friday, November 29, 2024
Friday, November 29, 2024

ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟ ಉದ್ಘಾಟನೆ

ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟ ಉದ್ಘಾಟನೆ

Date:

ಉಡುಪಿ, ನ.28: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಹಾಗೂ ಲಿಯೋ ಡಿಸ್ಟ್ರಿಕ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು. ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳ ಸೇವೆ ಅಗಾಧವಾದುದು. ಶಿಕ್ಷಕರುಗಳು ಮಕ್ಕಳನ್ನು ಹುರಿದುಂಬಿಸುತ್ತಿರುವ ರೀತಿ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿ ಈ ಎಲ್ಲಾ ಮಕ್ಕಳು ಉತ್ತಮ ಭವಿಷ್ಯ ಹೊಂದುವಂತಾಗಲಿ ಎಂದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಕ್ರೀಡಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಲಿಯೋ ಜಿಲ್ಲಾ ಅಧ್ಯಕ್ಷೆ ಶರೋನ್ ಮಬೀನ್, ರೀಜನಲ್ ಚೇರ್ ಪರ್ಸನ್ ವಿ.ಎಸ್ ಉಮ್ಮರ್, ಲಿಯೋ ಜಿಲ್ಲಾ ಸಂಯೋಜಕ ಮೊಹಮ್ಮದ್ ಮೌಲಾ, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷ ಗೋಪಾಲ ಅಂಚನ್, ರಾಜ್ಯ ವಿಶೇಷ ಶಿಕ್ಷಕ/ ಶಿಕ್ಷಕೇತರರ ಸಂಘದ ರಾಜ್ಯಾಧ್ಯಕ್ಷೆ ಡಾ. ಶಾಂತಿ ಹರೀಶ್, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆಗ್ನೇಸ್ ಕುಂದರ್, ರವೀಂದ್ರ ಹೆಚ್., ಪಾಲಕರ ಸಂಘದ ಅಧ್ಯಕ್ಷ ಜಯ ವಿಠ್ಠಲ್, ಜಿಲ್ಲೆಯ ವಿವಿಧ ವಿಶೇಷ ಚೇತನ ಶಾಲೆಯ ಶಿಕ್ಷಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಪ್ರಶಾಂತ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬೃಹತ್ ಪ್ರತಿಭಟನೆ

ಕೋಟ, ನ.29: ಕುಂದಾಪುರದಿಂದ ಹೆಜಮಾಡಿವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಅಸಮರ್ಪಕವಾಗಿದೆ ಎಂದು...

ನ.29: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಆಹಾರ ಮೇಳ

ಉಡುಪಿ, ನ.29: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ವಾಣಿಜ್ಯ ಸಂಘದ ವತಿಯಿಂದ...

ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ; ಹೊಸ ಸೇತುವೆಯಲ್ಲಿ ಸಂಚರಿಸಲು ಅವಕಾಶ

ಉಡುಪಿ, ನ.28: ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈಂದೂರು...

ರೈತ ಸಮುದಾಯಕ್ಕೆ ಪ್ರೋತ್ಸಾಹ ಅತ್ಯಗತ್ಯ: ಮಂಜುನಾಥ್ ಗಿಳಿಯಾರ್

ಕೋಟ, ನ.28: ರೈತ ಕಾಯಕವಿದ್ದರೆ ಸಮಾಜದಲ್ಲಿ ಬದುಕು ಜೀವಂತ. ಅಂತಹ ರೈತರ...
error: Content is protected !!