ಉಡುಪಿ, ನ.29: 8 ಲಕ್ಷ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಅತ್ರಾಡಿ ಗ್ರಾಮ ಪಂಚಾಯತ್ತಿನ ಗ್ರಾಮ ಆಡಳಿತಾಧಿಕಾರಿಗಳ ಕಚೇರಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಶಾಸಕರು ವಿವಿಧ ಸವಲತ್ತುಗಳನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಶಾರದಾ ಶೆಟ್ಟಿಗಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಜೋಗಿ, ಗ್ರಾಮ ಆಡಳಿತಾಧಿಕಾರಿಗಳಾದ ಸುಮಿತ್ರಾ ಹಾಗೂ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.
ಆತ್ರಾಡಿ: ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಉದ್ಘಾಟನೆ
ಆತ್ರಾಡಿ: ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಉದ್ಘಾಟನೆ
Date: