Sunday, February 23, 2025
Sunday, February 23, 2025

ಧೀರಜ್ ಐತಾಳಗೆ ಶೌರ್ಯ ಪ್ರಶಸ್ತಿ

ಧೀರಜ್ ಐತಾಳಗೆ ಶೌರ್ಯ ಪ್ರಶಸ್ತಿ

Date:

ಕೋಟ, ನ.30: ಸಾಲಿಗ್ರಾಮದ ನಿವಾಸಿ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಪುತ್ರ ಧೀರಜ್ ಐತಾಳ್ ಇವರಿಗೆ ಕರ್ನಾಟಕ ಸರಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಯಿತು. ಧೀರಜ್ ಪ್ರಾಥಮಿಕ ಶಿಕ್ಷಣವನ್ನು ಚಿತ್ರಪಾಡಿ ಪಿ.ಎಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಿಕ್ಷಣವನ್ನು ಕೋಟದ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಎಂಟನೆ ತರಗತಿಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರ ಹೆಬ್ಬಾವಿನೊಂದಿಗೆ ಸೆಣಸಾಟ ನೋಡುಗರನ್ನು ಬೆರಗಾಗುವಂತೆ ಮಾಡಿದ್ದು ವಿಶೇಷವಾಗಿದೆ. ಇತ್ತೀಚಿಗಿನ ವರ್ಷಗಳಲ್ಲಿ ಸಾಕಷ್ಟು ನೆರೆ ಹಾವಳಿ ಸಂದರ್ಭದಲ್ಲಿ ಕಾಣಿಸಿಕೊಂಡ ೮೦ಕ್ಕೂ ಅಧಿಕ ಹೆಬ್ಬಾವುಗಳನ್ನು ಹಿಡಿದು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ನಾಗರಹಾವುಗಳನ್ನು ಹಿಡಿಯುವುದರಲ್ಲಿ ನೈಪುಣ್ಯತೆ ಹೊಂದಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!