Monday, February 24, 2025
Monday, February 24, 2025

ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ: ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್

ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ: ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್

Date:

ಉಡುಪಿ, ನ.30: ರಾಜ್ಯ ಸರಕಾರದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಸರಕಾರಕ್ಕೆ ಹಾಗೂ ಜನರ ಮಧ್ಯ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು. ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಯಶಸ್ವಿಗೊಳಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಅವರು ಶನಿವಾರ ನಗರದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ರಾಜ್ಯ ಸರಕಾರದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನಸಾಮಾನ್ಯರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿದೆ. ಅಭಿವೃದ್ಧಿಗಳ ಜೊತೆಗೆ ಮಹಿಳೆಯರಿಗೆ, ಮಕ್ಕಳಿಗೆ, ಯುವಕರಿಗೆ ಅವರ ಆರ್ಥಿಕ ಸಬಲೀಕರಣಕ್ಕೆ ಸಹಾಯಮಾಡುತ್ತಿದೆ. ಸರಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದರೊಂದಿಗೆ ಜನಸಾಮಾನ್ಯರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗೋಣ ಎಂದರು. ಇದೇ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಗುರುತಿನ ಚೀಟಿ ವಿತರಿಸಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಎಲ್ಲಾ ಅನುಷ್ಠಾನ ಸಮಿತಿಯ ಸದಸ್ಯರುಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!