Sunday, January 19, 2025
Sunday, January 19, 2025

ಮಂಗಳೂರು ವಿ.ವಿ. ಅಂತರ್‌ ಕಾಲೇಜು ಅತ್ಲೇಟಿಕ್ಸ್

ಮಂಗಳೂರು ವಿ.ವಿ. ಅಂತರ್‌ ಕಾಲೇಜು ಅತ್ಲೇಟಿಕ್ಸ್

Date:

ಉಡುಪಿ, ಡಿ.1: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಅಮೃತ್ ಮತ್ತು ಲಿಯೋ ಡಿಸ್ಟ್ರಿಕ್ಟ್ ೩೧೭ಸಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್‌ಕಾಲೇಜು ಅತ್ಲೆಟಿಕ್ಸ್ ಕ್ರೀಡಾಕೂಟ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಿತು. ಶಾಸಕ ಯಶಪಾಲ್ ಎ. ಸುವರ್ಣ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಾ, ಕ್ರೀಡೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ತೆಂಕನಿಡಿಯೂರು ಕಾಲೇಜನ್ನು ಶ್ಲಾಘಿಸುತ್ತಾ ಕ್ರೀಡೆ ನಮ್ಮ ದೈಹಿಕ ಕ್ಷಮತೆಯನ್ನೇ ಅಲ್ಲ ಮನೋಬಲವನ್ನು ಹೆಚ್ಚಿಸುತ್ತದೆ. ಯುವಜನತೆ ಕ್ರೀಡೆಯಲ್ಲಿ ತೊಡಗಿಸಿಕೊಂಡು ಸಕಾರಾತ್ಮಕವಾಗಿ ಬೆಳೆದಾಗ ಸಂಸ್ಥೆಗೂ ಸಮಜಕ್ಕೂ ಶ್ರೇಯಸ್ಸು ಎಂದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅತ್ಲೆಟಿಕ್ ಫೆಡರೇಶನ್ ಅಧ್ಯಕ್ಷರಾದ ಹರಿಪ್ರಸಾದ್‌ರೈ, ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತಾ ಕ್ರೀಡಾ ಮನೋಭಾವನೆಯಿಂದ ಸ್ಪರ್ಧಿಸುವಂತೆ ಕ್ರೀಡಾಪಟುಗಳಿಗೆ ಸೂಚಿಸಿದರು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜ, ಕೈಗಾರಿಕೋದ್ಯಮಿ ಆನಂದ ಸುವರ್ಣ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವಕರ, ಡಾ. ಕೆ. ರಾಮಚಂದ್ರ, ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕ್ರೀಡಾಕೂಟ ಆಯೋಜಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ
ಯುವ ಸಬಲೀಕರಣ ಕ್ರೀಡಾ ಇಲಾಖೆಯ ಡಾ. ರೋಶನ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪದವಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ ಎನ್. ವಂದನಾರ್ಪಣೆಗೈದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!