Sunday, January 19, 2025
Sunday, January 19, 2025

ಕೋಡಿ ಕನ್ಯಾಣ: ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘದ ನೂತನ ಕಟ್ಟಡ ಲೋಕಾರ್ಪಣೆ

ಕೋಡಿ ಕನ್ಯಾಣ: ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘದ ನೂತನ ಕಟ್ಟಡ ಲೋಕಾರ್ಪಣೆ

Date:

ಕೋಟ, ಡಿ.2: ಮಕ್ಕಳಿಗೆ ಯಕ್ಷಗಾನ ಕಲಿಕೆ ಕೇಂದ್ರವಾಗಿಸಿ ಆ ಮೂಲಕ ಸಂಸ್ಕಾರಭರಿತರಾಗಲು ಸಾಧ್ಯ ಎಂದು ನಾಡೋಜ ಡಾ.ಜಿ ಶಂಕರ್ ಅಭಿಪ್ರಾಯಪಟ್ಟರು. ಶನಿವಾರ ಕೋಡಿ ಕನ್ಯಾಣ ಶ್ರೀರಾಮ ದೇಗುಲ ವಠಾರದ ಸಮೀಪ ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ 38ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಕಟ್ಟಡ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಜಗನ್ನಾಥ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉದ್ಯಮಿ ಸಿ.ಎ ನಂಜುಂಡ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಆಶಿತ ಎಂಟರ್ ಪ್ರೈಸಸ್ ಸಾಸ್ತಾನ ಮಾಲಿಕ ಆನಂದ ಮರಕಾಲ, ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ಪಿಡಿಓ ರವೀಂದ್ರ ರಾವ್, ಉದ್ಯಮಿ ಮುತ್ತಪ್ಪ ಸಾಲಿಯಾನ್, ಸ್ಥಳದಾನಿ ಮಾಧವ ಉಪಾಧ್ಯ, ಮೊಗವೀರ ಯುವ ಸಂಘದ ಜಿಲ್ಲಾಧ್ಯಕ್ಷ ಜಯಂತ್ ಅಮೀನ್, ಶ್ರೀ ರಾಮ ದೇಗುಲದ ಸುರೇಶ್ ಖಾರ್ವಿ, ಮಾಜಿ ಅಧ್ಯಕ್ಷ ಜಯ ಕುಮಾರ್ ಎ.ಎಸ್., ಕೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಣ್ಣಪ್ಪ ಕುಂದರ್, ಮೀನುಗಾರ ಸಂಘದ ಉಪಾಧ್ಯಕ್ಷ ಉದಯ್ ಕಾಂಚನ್, ಮತ್ಸ್ಯೋದ್ಯಮಿ ಶಂಕರ್ ಕುಂದರ್, ಯಕ್ಷಗಾನ ಸಂಘದ ಸ್ಥಾಪಕಾಧ್ಯಕ್ಷ ಮಹಾಬಲ ಭಂಡಾರಿ, ಕಾರ್ಯದರ್ಶಿ ಶ್ರೇಯಸ್ ಕರ್ಕೇರ, ಸ್ಥಳೀಯರಾದ ರಾಜೇಶ್ ಕರ್ಕೇರ, ಸಂಘದ ಯಕ್ಷಗಾನ ಕಲಿಕಾ ಕೇಂದ್ರ ಗುರುಗಳಾದ ಪ್ರತೀಶ್ ಕುಮಾರ್ ಬ್ರಹ್ಮಾವರ, ಕೋಟ ಸಿಎ ಬ್ಯಾಂಕ್ ನಿವೃತ್ತ ಪ್ರಬಂಧಕ ಸುರೇಂದ್ರ ಕೋಡಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಪ್ರಾಯೋಜಕತ್ವದಲ್ಲಿ ಸಂಘದ ಯಕ್ಷಗಾನ ಕಲಿಕಾ ಕೇಂದ್ರ ಗುರುಗಳಾದ ಪ್ರತೀಶ್ ಕುಮಾರ್ ಬ್ರಹ್ಮಾವರ ಇವರ ನಿರ್ದೇಶನದಲ್ಲಿ ಯಕ್ಷಗಾನ ಪ್ರಾತ್ಯಕ್ಷಿಕೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅದ್ದೂರಿ ಯಕ್ಷಗಾನ ಚಕ್ರ ಚಂಡಿಕೆ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!