ಕಾಪು, ಡಿ.2: ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ, ಕಾಪು ಮಂಡಲ, ಸರ್ಕಲ್ ಫ್ರೆಂಡ್ಸ್, ಉದ್ಯಾವರ ಪಡುಕರೆ, ಜಿಲ್ಲಾ ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಕೋಟೆ ಪಂಚಾಯತ್ ಬಳಿಯ ಸಮಾಜ ಮಂದಿರದಲ್ಲಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ, ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಮೀಳಾ ಜತ್ತನ್ನ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಶೆಟ್ಟಿ, ರಕ್ತ ನಿಧಿ ವಿಭಾಗದ ಡಾ. ವೀಣಾ ಉಪಸ್ಥಿತರಿದ್ದರು.
ಬೃಹತ್ ರಕ್ತದಾನ ಶಿಬಿರ
ಬೃಹತ್ ರಕ್ತದಾನ ಶಿಬಿರ
Date: