Tuesday, February 25, 2025
Tuesday, February 25, 2025

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

Date:

ಬ್ರಹ್ಮಾವರ, ಡಿ.2: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು.

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಶಾಲೆಯ ಶಿಕ್ಷಕರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಮನವಿಯ ಮೇರೆಗೆ 2 ಕೊಠಡಿಗಳನ್ನು 20 ಲಕ್ಷ ವೆಚ್ಚದಲ್ಲಿ ಶಾಸಕರ ನಿಧಿ ಹಾಗೂ ದಾನಿಗಳ ಸಹಕಾರದಿಂದ ಶೀಘ್ರದಲ್ಲಿ ನಿರ್ಮಾಣಗೊಳ್ಳಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆಯೊಂದಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶತಮಾನೋತ್ಸವ ಸಂಭ್ರಮದ ವಿಜ್ಞಾಪನೆ ಪತ್ರವನ್ನು ಬಿಡುಗಡೆ ಮಾಡಲಾಯಿತು.

ಶತಮಾನೋತ್ಸವ ಸಂಭ್ರಮದ ಅಧ್ಯಕ್ಷರಾದ ಸಂತೋಷ್ ಜತ್ತನ್, ದಾನಿಗಳಾದ ನ್ಯೂ ಕರ್ನಾಟಕ ಬಿಲ್ಡರ್ಸ್ ನ ಚೇತನ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸದಾನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುಳಾ ಜಯಕರ್, ಹೇರೂರು ಎಜುಕೇಷನ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ದೀಪಾ ಚೇತನ್ ಕುಮಾರ್ ಶೆಟ್ಟಿ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಚಂದ್ರಕಲಾ , ಶತಮಾನೋತ್ಸವ ಸಂಭ್ರಮದ ಕಾರ್ಯದರ್ಶಿ ಅಶೋಕ್ ಹೇರೂರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶೋಕ್ ಅಮೀನ್, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕಾಮತ್, ಮೀರಾ ಸದಾನಂದ, ಹೇಮ ಅಶೋಕ್, ಆನಂದ ಪೂಜಾರಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ್ ಕುಲಾಲ್, ಸಚಿನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!