Thursday, December 5, 2024
Thursday, December 5, 2024

ಹೇರೂರು: ಉಚಿತ ದಂತ ವೈದ್ಯಕೀಯ ಶಿಬಿರ

ಹೇರೂರು: ಉಚಿತ ದಂತ ವೈದ್ಯಕೀಯ ಶಿಬಿರ

Date:

ಬ್ರಹ್ಮಾವರ, ಡಿ.2: ಶ್ರೀರಾಮ್ ಫ್ರೆಂಡ್ಸ್ ಹೇರೂರು, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಹೇರೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಂಸಿ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಊರಿನ ಸಹಕಾರದಿಂದ ಪ್ರತಿಯೊಂದು ಗ್ರಾಮದಲ್ಲಿ ಹೊಸ ಬದಲಾವಣೆ ಅಭಿವೃದ್ಧಿ ಸಾಧ್ಯವಾಗುವುದು ಕೇವಲ ಸರ್ಕಾರದಿಂದ ಮಾತ್ರವಲ್ಲದೆ ಗ್ರಾಮಸ್ಥರ ಸಹಕಾರ ಮತ್ತು ಮಾರ್ಗದರ್ಶನ ಇದ್ದಲ್ಲಿ ಗ್ರಾಮದ ಅದೇ ರೀತಿ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಮುಖ್ಯ ಅತಿಥಿ ಮಾಜಿ ಸಚಿವ ಪ್ರಮೋದ ಮಧ್ವರಾಜ್ ಮಾತನಾಡಿ, ಪ್ರತಿ ಹಳ್ಳಿಯಲ್ಲಿ ದಂತ ಚಿಕಿತ್ಸೆ ಶಿಬಿರಗಳನ್ನು ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಮಾತನಾಡಿ, ಈ ಊರಿನ ಜನತೆಯ ಬೆಂಬಲದ ಪರಿಣಾಮ ಇಂದು ನಾನು ಪ್ರಾಧಿಕಾರದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ಗ್ರಾಮದ ಅಭಿವೃದ್ಧಿಯಲ್ಲಿ ನಮ್ಮ ಸಹಕಾರ ಸದಾ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಸುವರ್ಣ ಎಂಟರ್ಪ್ರೈಸಸ್ ನ ಸುನಿತಾ ಮಧುಸೂಧನ್, ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಯಕರ್, ಡಾ. ಪ್ರಜ್ಞಾ ನಾಯಕ್, ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷ ಸೂರಜ್ ಕೋಟ್ಯಾನ್, ಗೌರವಾಧ್ಯಕ್ಷ ಸುರೇಶ್ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರ. ಉದ್ಯಮಿ ಚೇತನ್ ಕುಮಾರ್ ಶೆಟ್ಟಿ, ಲೆಕ್ಕಪರಿಶೋಧಕ ಜೀವನ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಅವರನ್ನು ಸನ್ಮಾನಿಸಲಾಯಿತು. ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು. ವಿಜಯ್ ಸನಿಲ್ ಸ್ವಾಗತಿಸಿ, ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ರಾಮಕುಂದರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ...

ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ

ಉಡುಪಿ, ಡಿ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...
error: Content is protected !!