Wednesday, December 4, 2024
Wednesday, December 4, 2024

ತೆಂಕನಿಡಿಯೂರು: 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

ತೆಂಕನಿಡಿಯೂರು: 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

Date:

ಉಡುಪಿ, ಡಿ.2: ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡಾನ್ ವರೆಗೆ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಅಲ್ಪಸಂಖ್ಯಾತ ಇಲಾಖೆಯ 1 ಕೋಟಿ ಅನುದಾನದ ಕಾಮಗಾರಿ ನಡೆಯುತ್ತಿದ್ದು, ತೆಂಕನಿಡಿಯೂರು ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೂ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಹಂತ ಹಂತವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದ ಮೂಲಕ ರಸ್ತೆ ಸಹಿತ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸದರು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅರುಣ್ ಜತ್ತನ್, ಗ್ರಾಮ ಪಂಚಾಯತ್ ಸದಸ್ಯರಾದ ಗಾಯತ್ರಿ, ಮಾಲಿನಿ, ಶಾಲಿನಿ, ಪುಷ್ಪ, ರೇಖಾ, ವಿಕಿತ, ಗೀತಾ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪಕ್ಷದ ಪ್ರಮುಖರಾದ ರತ್ನಾಕರ, ಉಮೇಶ್ ಶೆಟ್ಟಿ, ಕೃಷ್ಣ ಶೆಟ್ಟಿ, ರವಿ ಆಚಾರ್ಯ‌, ಕಿರಣ್ ಪಿಂಟೋ, ಕಾವೇರಿ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ...

ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ

ಉಡುಪಿ, ಡಿ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...
error: Content is protected !!