Friday, January 17, 2025
Friday, January 17, 2025

ಚಂಡಮಾರುತ ಪ್ರಭಾವ: ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ

ಚಂಡಮಾರುತ ಪ್ರಭಾವ: ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ

Date:

ಉಡುಪಿ, ಡಿ.2: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿಯೂ ಇದರ ಪರಿಣಾಮ ಇರುವುದರಿಂದ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಜಿಲ್ಲಾ/ತಾಲೂಕು ಮಟ್ಟದ. ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್, ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ, ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು. ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.

ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀತಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳಬೇಕು. ಸಾರ್ವಜನಿಕರು ಶೀತಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯ ಗೋಡೆ ಕಂಡುಬಂದಲ್ಲಿ ತುರ್ತುಸೇವೆಗೆ ಶುಲ್ಕರಹಿತ: 1077, ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ...
error: Content is protected !!