Friday, January 17, 2025
Friday, January 17, 2025

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

Date:

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 25ನೇ ವರ್ಷದ ವರ್ಷಾಚರಣೆ ಅಂಗವಾಗಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದೊಂದಿಗೆ ಕಾರ್ಕಳದ ಶೇಷಾದ್ರಿ ನಗರದ ಶ್ರೀ ವೆಂಕಟರಮಣ ಗೋವಿಗಾಗಿ ಮೇವು ಅಭಿಯಾನದ ಮೂಲಕ ಗೋಶಾಲೆಗೆ ಬೈಹುಲ್ಲು ಕೊಡುಗೆ ಹಸ್ತಾಂತರಿಸಲಾಯಿತು. ಗೋವುಗಳು ಮನುಷ್ಯನ ಅವಿಭಾಜ್ಯ ಅಂಗವಾಗಿದೆ. ಜೀವನ ಪರ್ಯಂತ ನಮಗೆ ಹಾಲುಣಿಸುವ ಗೋಮಾತೆಗೆ ನಾವು ಅಭಾರಿಯಾಗಿ ಬದುಕಬೇಕಾಗಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಗೋಶಾಲೆಗೆ ಬೈಹುಲ್ಲು ಹಸ್ತಾಂತರಿಸಿ ಮಾತನಾಡಿದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಸದಸ್ಯರಾದ ಮಂಜುನಾಥ ಆಚಾರ್ಯ, ವೀಣಾ ಪೂಜಾರಿ, ಸುರೇಶ್ ಅಬ್ಬನಡ್ಕ, ಪ್ರದೀಪ್ ಸುವರ್ಣ, ಪುಷ್ಪ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಶ್ರದ್ಧಾ ಪೂಜಾರಿ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ...
error: Content is protected !!