Thursday, December 12, 2024
Thursday, December 12, 2024

ಪ್ರಸ್ತುತ ಸಾಲಿನ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜಿಸಿ: ಪ್ರೊ.ಶ್ರೀಧರ್ ಪ್ರಸಾದ್

ಪ್ರಸ್ತುತ ಸಾಲಿನ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜಿಸಿ: ಪ್ರೊ.ಶ್ರೀಧರ್ ಪ್ರಸಾದ್

Date:

ಉಡುಪಿ, ಡಿ.5: ವಿದ್ಯಾರ್ಥಿಗಳು ಸಮುದಾಯ ಸೇವಾ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪ್ರಸ್ತುತ ಸಾಲಿನ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಹೇಳಿದರು. ಅವರು ಗುರುವಾರ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ತಮ್ಮ ವಿದ್ಯಾಬ್ಯಾಸದ ಜೊತೆಗೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸಾಮಾನ್ಯ ಜ್ಞಾನ
ಹೆಚ್ಚುತ್ತದೆ. ಅದರಲ್ಲಿಯೂ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಹಾಗೂ ನಾಯಕತ್ವದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶಗಳು ಒದಗುತ್ತವೆ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ಹೆಚ್ಚು ಜನರು ಎನ್.ಎಸ್.ಎಸ್ ನಲ್ಲಿ ಭಾಗವಹಿಸುವಂತೆ ಉತ್ತೇಜಿಸಬೇಕು ಎಂದರು.

ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಸಮಾಜ ಕಲ್ಪನೆ ಹುಟ್ಟುಹಾಕಲು ಹಾಗೂ ಪಕ್ಷಪಾತವಿಲ್ಲದೇ ಸಮಾಜಕ್ಕೆ ಸೇವೆ ಒದಗಿಸುವ ಗುರಿ ಹೊಂದಿದೆ ಎಂದ ಅವರು. ಎನ್.ಎಸ್.ಎಸ್ ಶಿಬಿರದಲ್ಲಿ ಸಾಮಾಜಿಕ ಸಮಸ್ಯೆಗಳು, ಶಿಕ್ಷಣ ಮತ್ತು ಸ್ವಚ್ಛತೆಯಂತಹ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆ ಕಾರ್ಯಕ್ರಮಗಳು, ಜಾಥಾಗಳನ್ನು ಶಿಬಿರ ಆಯೋಜಿಸುವ ಸ್ಥಳಗಳಲ್ಲಿ ನಡೆಸಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ,ವಾರ್ತಾಧಿಕಾರಿ ಮಂಜುನಾಥ್ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಡಯಟ್ ಹಿರಿಯ ಉಪನ್ಯಾಸಕ ಡಾ. ಅಶೋಕ್ ಕಾಮತ್, ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಪ್ರಾಧ್ಯಾಪಕ ಸೋಜನ್ ಕೆ.ಜಿ, ಯೋಗೀಶ್ ಡಿ.ಹೆಚ್, ಪ್ರೊ. ನಿಕೇತನ, ಪ್ರಾಧ್ಯಾಪಕಿ ವಿದ್ಯಾ ಡಿ., ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದ್ರಾಳಿ ರುದ್ರಭೂಮಿಗೆ ಅಂತ್ಯಸಂಸ್ಕಾರ ಧಾಮ

ಉಡುಪಿ, ಡಿ.12: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂದರ್ಭದಲ್ಲಿ...

ನಮ್ಮ ಮನಸ್ಸು ನಮ್ಮ ಬೆಸ್ಟ್ ಫ್ರೆಂಡ್

ಅಮ್ಮ ಬೈದಳು ಎಂದು ದುಃಖದಲ್ಲಿದ್ದ ಅಖಿಲ ತನ್ನ ರ್‍ಯಾಂಕ್ ಸುದ್ದಿ ಕೇಳಿ...

ಪ್ರೌಢಶಾಲಾ ಸಹಶಿಕ್ಷಕರ ಬಡ್ತಿ ಪ್ರಕ್ರಿಯೆ ಫೆಬ್ರವರಿ ಅಂತ್ಯದೊಳಗೆ ಪೂರ್ಣ

ಬೆಳಗಾವಿ, ಡಿ.12: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ...

ಕೆ.ಎಂ.ಸಿ: 15 ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

ಮಣಿಪಾಲ, ಡಿ.12: ಕೆಎಂಸಿ ಮಣಿಪಾಲದ ಹೃದ್ರೋಗ ವಿಭಾಗ ಮತ್ತು ಹೃದಯರಕ್ತನಾಳದ ತಂತ್ರಜ್ಞಾನ...
error: Content is protected !!