ಉಡುಪಿ, ಡಿ.8: ಪ್ರೊಫೆಸರ್ ಶಂಕರ್ ಅಭಿನಂದನಾ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಖ್ಯಾತಿಯ ಜಾದುಗಾರರಾದ ಪ್ರೊ. ಶಂಕರ್ ಅಭಿನಂದನಾ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ನೀಡಲಾಯಿತು.
ಪುತ್ತಿಗೆ ಶ್ರೀಗಳು ಅನುಗ್ರಹ ಸಂದೇಶ ನೀಡಿ, ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಸಮಿತಿ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಸಂಚಾಲಕ ರವಿರಾಜ್ ಹೆಚ್.ಪಿ., ಪ್ರಧಾನ ಕಾರ್ಯದರ್ಶಿ ಜನಾರ್ದನ ಕೊಡವೂರು, ಪದಾಧಿಕಾರಿಗಳಾದ ರಂಜನಿ ವಸಂತ್, ಪೂರ್ಣಿಮಾ ಜನಾರ್ದನ, ರಾಘವೇಂದ್ರ ಪ್ರಭು ಕರ್ವಾಲು, ದೀಪಾ ಚಂದ್ರಕಾಂತ್ ಮೊದಲಾದವರಿದ್ದರು.