Sunday, January 19, 2025
Sunday, January 19, 2025

ಸ್ವಚ್ಛತೆಯ ಬಗ್ಗೆ ಸ್ಥಳೀಯರಿಗೆ ಅರಿವಿರಬೇಕು: ಅಣ್ಣಪ್ಪ ಕುಂದರ್

ಸ್ವಚ್ಛತೆಯ ಬಗ್ಗೆ ಸ್ಥಳೀಯರಿಗೆ ಅರಿವಿರಬೇಕು: ಅಣ್ಣಪ್ಪ ಕುಂದರ್

Date:

ಕೋಟ, ಡಿ.9: ಪರಿಸರ ಸ್ವಚ್ಛತೆಯ ಬಗ್ಗೆ ಸ್ಥಳೀಯರು ಜಾಗೃತಿ ಹೊಂದಬೇಕು, ಆಗಲೇ ಪರಿಸರ ಶುಚಿಯಾಗಿಡಲು ಸಾಧ್ಯ ಎಂದು ಕೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಣ್ಣಪ್ಪ ಕುಂದರ್ ಅಭಿಪ್ರಾಯಪಟ್ಟರು. ಭಾನುವಾರ ಕೋಡಿ ಹೊಸಬೇಂಗ್ರೆ ಬೀಚ್ ಪ್ರದೇಶದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ೨೩೩ನೇ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕೋಡಿ ಗ್ರಾಮ ಪಂಚಾಯತ್, ಸಂಜೀವಿನಿ ಒಕ್ಕೂಟ, ಪಂಚಶಕ್ತಿ ಸಂಘ ಕೋಡಿ ತಲೆ,ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಇವರುಗಳ ಸಹಯೋಗದೊಂದಿಗೆ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ ಅಧ್ಯಕ್ಷತೆ ವಹಿಸಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿದರು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಯುವಕ ಮಂಡಲದ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಪಂಚಶಕ್ತಿ ಸಂಘ ಕೋಡಿ ತಲೆ ಕಾರ್ಯದರ್ಶಿ ಸಂದೀಪ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೀಪಾ ಕಾರ್ವಿ, ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಎಸ್ ಎಲ್ ಆರ್ ಎಂ ಘಟಕದ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು. ಪಂಚವರ್ಣದ ಸದಸ್ಯ ರವೀಂದ್ರ ಕೋಟ ನಿರೂಪಿಸಿ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!