Saturday, January 18, 2025
Saturday, January 18, 2025

ಡಿ.11: ಗಂಗೊಳ್ಳಿಯಲ್ಲಿ ಮಕ್ಕಳ ಸಂತೆ ಮತ್ತು ವಿಜ್ಞಾನ ಮಾದರಿ ಸ್ಪರ್ಧೆ

ಡಿ.11: ಗಂಗೊಳ್ಳಿಯಲ್ಲಿ ಮಕ್ಕಳ ಸಂತೆ ಮತ್ತು ವಿಜ್ಞಾನ ಮಾದರಿ ಸ್ಪರ್ಧೆ

Date:

ಕುಂದಾಪುರ, ಡಿ.9: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ವಿದ್ಯಾರ್ಥಿಗಳಿಂದ ಮಕ್ಕಳ ಸಂತೆ ಬಿಜಿನೆಸ್ ಡೇ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ಕಾರ್ಯಕ್ರಮವು ಬುಧವಾರ 11.12.2024 ರಂದು ಬೆಳಗ್ಗೆ 9:00 ರಿಂದ 4 ಗಂಟೆಯ ತನಕ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿನೋದ್ ಪೈ ಮಕ್ಕಳ ಸಂತೆಯನ್ನು ಉದ್ಘಾಟಿಸಲಿದ್ದು ಪ್ರದೀಪ್ ಕುಮಾರ್ ಶೆಟ್ಟಿ ಅವರು ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಗಂಗೊಳ್ಳಿಯ ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಗೋಪಾಲ ದೇವಾಡಿಗ, ರಾಘವೇಂದ್ರ ಶೇರುಗಾರ್, ಭಗಿನಿ ಕ್ರೆಸೆನ್ಸ್, ಸಭಾ ಭಾನು ಮತ್ತು ಸುಮಯ್ಯ ಮಕ್ಕಳ ಸಂತೆಯ ವಿವಿಧ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಲಿದ್ದು, ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಕ್ಕಳ ಸಂತೆಯಲ್ಲಿ ಭೂತದ ಮನೆ, ಫುಡ್ ಜೋನ್, ವಿ ಆರ್ ಎಫೆಕ್ಟ್, ಬಟ್ಟೆ ಮಳಿಗೆಗಳು ವಿಶೇಷ ಆಕರ್ಷಣೆಯಾಗಿರಲಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!