Thursday, December 12, 2024
Thursday, December 12, 2024

ಆಂಗ್ಲ ವ್ಯಾಮೋಹ ಬಿಡಿ, ಸರಕಾರಿ ಶಾಲೆಗಳತ್ತ ಚಿತ್ತ ಹರಿಸಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ

ಆಂಗ್ಲ ವ್ಯಾಮೋಹ ಬಿಡಿ, ಸರಕಾರಿ ಶಾಲೆಗಳತ್ತ ಚಿತ್ತ ಹರಿಸಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ

Date:

ಕೋಟ, ಡಿ.9: ಇಲ್ಲಿನ ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ಜರಗಿತು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರ ಪಾತ್ರ ಗಣನೀಯವಾದದ್ದು. ಆದರೆ ಪ್ರಸ್ತುತ ದಿನಗಳಲ್ಲಿ ಪೋಷಕರಿಗೆ ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಖಾಸಗಿ ಶಾಲೆಗಳತ್ತ ಮುಖಮಾಡುತ್ತಿರುವುದು ಬೇಸರದ ಸಂಗತಿ. ಕನ್ನಡ ಮಾಧ್ಯಮದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆಗಳಿವೆ, ಅದಕ್ಕೆ ವಾರ್ಷಿಕೋತ್ಸವ ಕಾರ್ಯಕ್ರಮಗಳು ವೇದಿಕೆ ಕಲ್ಪಿಸಲಿದೆ. ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಇಲ್ಲಿನ ಮಕ್ಕಳಲ್ಲಿ ಖಾಸಗಿ ಶಾಲೆಯ ಮಕ್ಕಳಿಗೆ ಸರಿಸಮನಾಗಿ ಬೆಳೆದು ನಿಂತಿದೆ ಎಂದರು. ನಿವೃತ್ತರಾದ ಶಾಲಾ ಮುಖ್ಯ ಶಿಕ್ಷಕ ರಮೇಶ್ ಇವರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಪ್ರಜ್ವಲ್, ಸಲ್ಮಾನ್, ಪ್ರಜ್ಞಾ, ವಿಶಾಕ, ಮರ್ವಾನ್, ನೂತನ್, ನಿಧಿ, ಅನನ್ಯ,ಮನ್ವಿತಾ ಜೋಗಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಕ್ರೀಡಾ ಸಾಮಾಗ್ರಿಗಳನ್ನು ಕ್ಲಬ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಶಾಲೆಗೆ ಹಸ್ತಾಂತರಿಸಿದರು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಬಹುಮಾನ ವಿತರಣೆ, ಕಲಿಕಾ ಸಾಧನಗೈದ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು.

ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ, ಸದಸ್ಯರಾದ ಶೇಖರ್ ಜಿ., ಯೋಗೇಂದ್ರ ಪೂಜಾರಿ, ಮಾಜಿ ತಾ.ಪಂ ಸದಸ್ಯರಾದ ಭರತ್ ಕುಮಾರ್ ಶೆಟ್ಟಿ, ಕೋಟ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ನ್ಯಾಯವಾದಿ ಟಿ.ಮಂಜುನಾಥ್ ಗಿಳಿಯಾರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ತಿಮ್ಮ ಪೂಜಾರಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಸಂತಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಜೂಲಿಯಟ್ ಕ್ರಾಸ್ತಾ ಉಪಸ್ಥಿತರಿದ್ದರು. ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಅಡಿಗ ಸ್ವಾಗತಿಸಿ, ಶಿಕ್ಷಕ ವಿಜಯ ನಿರೂಪಿಸಿದರು. ದೈಹಿಕ ಶಿಕ್ಷಕ ಶೇಖರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು...

ಬಗರ್ ಹುಕುಂ ಅರ್ಜಿ ಪುನರ್ ಪರಿಶೀಲನೆ

ಬೆಳಗಾವಿ, ಡಿ.11: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53,...

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

ಬೆಳಗಾವಿ, ಡಿ.11: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ...

ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲು ಕ್ರಮ

ಬೆಳಗಾವಿ, ಡಿ.11: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ...
error: Content is protected !!