Sunday, January 19, 2025
Sunday, January 19, 2025

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಡಿ.10: ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಅವೈಜ್ಞಾನಿಕವಾಗಿ ಕೈಗೊಳ್ಳದೇ ವೈಜ್ಞಾನಿಕವಾಗಿ ನಿರ್ಮಾಣ , ಅವುಗಳ ನಿರ್ವಹಣೆ ಮಾಡಿ ಸುವ್ಯವಸ್ಥಿತವಾಗಿ ಇಟ್ಟಾಗ ಮಾತ್ರ ಸಾರ್ವಜನಿಕ ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಅಧಿಕಾರಿಗಳು ಒತ್ತು ನೀಡಿ, ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತ ಗಳ ಪ್ರಮಾಣವನ್ನು ಇಳಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು. ಉಡುಪಿ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ವರದಿಯಾದ ರಸ್ತೆ ಅಪಘಾತ ಗಳನ್ನು ಆಧರಿಸಿ ರಾಷ್ಟ್ರೀಯ ಹೆದ್ದಾರಿಗಳ ಸ್ಥಳಗಳಲ್ಲಿ ಅಪಘಾತವಾಗುವ ಕಪ್ಪುಚುಕ್ಕೆ 20 ಸ್ಥಳಗಳನ್ನು ಗುರುತಿಸಲಾಗಿದೆ. ಕಳೆದ ಸಭೆಯಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಸದರಿ ಸ್ಥಳಗಳಿಗೆ ಭೇಟಿ ನೀಡಿ ಅಪಘಾತಗಳು ಸಂಭವಿಸಲು ಕಾರಣ ಹಾಗೂ ಅವುಗಳ ತಡೆಗಟ್ಟಲು ಕೈ ಗೊಳ್ಳಬಹುದಾದ ವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಲಾಗಿತ್ತು. ಅದರನ್ವಯ ಕ್ರಮ ಕೈಗೊಂಡ ಅನುಪಾಲನಾ ವರದಿಯನ್ನು ನೀಡಲಾಗಿದೆ. ಬಾಕಿ ಉಳಿದ ಸ್ಥಳಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು ಅನುಪಾಲನೆ ಮಾಡದೆ ಇರುವ ಅಧಿಕಾರಿಗಳಿಗೆ ಹಾಗೂ ಸಭೆಗೆ ಹಾಜರಾಗದೆ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು. ಅಲ್ಲಿ ಒಂದೊಮ್ಮೆ ಅಪಘಾತ ವಾದಲ್ಲಿ ಅವರನ್ನು ಮೇಲು ಸಹ ಪ್ರಕರಣ ದಾಖಲಿಸ ಬೇಕು ಎಂದು ಸೂಚನೆ ನೀಡಿದರು.

ಉಡುಪಿ ನಗರಸಭೆಯ ವತಿಯಿಂದ ಮಣಿಪಾಲದ ಟೈಗರ್ ಸರ್ಕಲ್ ಸಮೀಪ ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಾಣವನ್ನು ಆದಷ್ಟು ಬೇಗ ಕೈಗೊಳ್ಳಬೇಕು..ಅದು ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಂಡಲ್ಲಿ ಮಾತ್ರ ಸಾರ್ವಜನಿಕರು ಅದನ್ನು ಬಳಕೆ ಮಾಡಿಕೊಳ್ಳುತ್ತಾರೆ. ಇಲ್ಲವಾದಲ್ಲಿ ಅದು ನಿರುಪಯುಕ್ತ ವಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಿ, ನಿರ್ಮಿಸಬೇಕು ಎಂದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಿಡಿಯನ್ ಓಪನ್ ಗ ಳನ್ನು ಮಾಡುವಾಗ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ಯಾವುದೇ ರೀತಿಯಲ್ಲಿ ಅದೇ ತಡೆಯಾಗದಂತೆ ಹಾಗೂ ವಾಹನ ದಟ್ಟಣೆ ಆಗದೆ ಇರುವ ಸ್ಥಳಗಳನ್ನು ಗುರುತಿಸಿ, ಐ.ಆರ್ ಸಿ ಗೈಡ್ ಲೈನ್ ಬಳಸಿಕೊಂಡು ವರದಿ ತಯಾರಿಸಿ ಸಮಿತಿಯ ಅನುಮತಿ ಪಡೆದು ಮಾಡಬೇಕು. ನಿಯಮಗಳನ್ನು ಉಲ್ಲಂಘಿಸಿ ಮಾಡಿರುವ ಮೀಡಿಯನ್ ಓಪನ್ ಗಳನ್ನು ರದ್ದುಪಡಿಸುವುದು ಸೂಕ್ತ ಎಂದರು. ಕಳೆದ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯ ಯೋಜನೆಯ ಕಾಮಗಾರಿಗಳನ್ನು ಅನುಮೋದನೆ ಪಡೆಯುವುದರೊಂದಿಗೆ ಆದಷ್ಟು ಶೀಘ್ರದಲ್ಲಿಯೇ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!