ಉಡುಪಿ, ಡಿ.10: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕಾಲೇಜು ಉಡುಪಿ ಹಾಗೂ; ಮಾನವ ಹಕ್ಕು ಫೆಡರೇಷನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ನೆರವೇರಿಸಿದರು. ಉಡುಪಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಆರ್. ಯೇೂಗೇಶ್ ಪ್ರತಿಜ್ಞಾ ವಿಧಿ ಬೇೂಧಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ಪ್ರಸಾದ ಅಧ್ಯಕ್ಷತೆ ವಹಿಸಿದರು. ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅವರು, ‘ಭಾರತೀಯ ಪರಿಕಲ್ಪನೆಯಲ್ಲಿ ಮಾನವ ಹಕ್ಕುಗಳು’ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು. ಹ್ಯೂಮನ್ ರೈಟ್ಸ್ ಫೇಡರೇಷನ್ ಆಫ್ ಇಂಡಿಯಾ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಮಂಜುನಾಥ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು.
ಅಜ್ಜರಕಾಡು ಕಾಲೇಜು: ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಅಜ್ಜರಕಾಡು ಕಾಲೇಜು: ವಿಶ್ವ ಮಾನವ ಹಕ್ಕುಗಳ ದಿನಾಚರಣೆ
Date: