ಬ್ರಹ್ಮಾವರ, ಡಿ.12: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು ಇವರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಅವರ ಸಹಕಾರದೊಂದಿಗೆ ರೂ. 3.00 ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸಿದ ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ‘ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್’ ನಾಮಕರಣ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಹೆಚ್. ಎಸ್. ಶೆಟ್ಟಿ, ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ತಜ್ಞರು, ಪ್ರೇರಣಾತ್ಮಕ ಉಪನ್ಯಾಸಕರಾದ ಡಾ. ಗುರುರಾಜ್ ಖರ್ಜಗಿ, ಶಾಲಾ ಶಿಕ್ಷಣ ಮತ್ತು ಪ್ರೌಢಶಾಲಾ ಇಲಾಖೆ ಉಪ ನಿರ್ದೇಶಕರಾದ ಕೆ. ಗಣಪತಿ, ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಉಪ ನಿರ್ದೇಶಕರಾದ ಮಾರುತಿ, ವಾರಂಬಳ್ಳಿ ಪಂಚಾಯತ್ ಅಧ್ಯಕ್ಷರಾದ ಬಿ ಆರ್ ನಿತ್ಯಾನಂದ, ಮೋಹನ್ ಶೆಟ್ಟಿ, ರವೀಂದ್ರ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.
ಬ್ರಹ್ಮಾವರ: ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್’ ನಾಮಕರಣ
ಬ್ರಹ್ಮಾವರ: ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್’ ನಾಮಕರಣ
Date: