Friday, December 13, 2024
Friday, December 13, 2024

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರದಾನ

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರದಾನ

Date:

ಉಡುಪಿ, ಡಿ.12: ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು. ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ, ಶಿಶು, ಗರ್ಭಿಣಿ ಮರಣ ಸಂಭವಿಸದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ ಈ ಪ್ರಶಸ್ತಿ ಸಂದಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ, ಡಿ.12: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ...

ಸ್ಕೌಟ್ಸ್ ಗೈಡ್ಸ್ ದೇಶಪ್ರಮಕ್ಕೆ ಮುನ್ನುಡಿ: ರಾಜೇಂದ್ರ ಭಟ್ ಕೆ

ವಿದ್ಯಾಗಿರಿ(ಮೂಡುಬಿದಿರೆ), ಡಿ.12: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ರಾಷ್ಟ್ರ...

ಇಂದ್ರಾಳಿ ರುದ್ರಭೂಮಿಗೆ ಅಂತ್ಯಸಂಸ್ಕಾರ ಧಾಮ

ಉಡುಪಿ, ಡಿ.12: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂದರ್ಭದಲ್ಲಿ...

ನಮ್ಮ ಮನಸ್ಸು ನಮ್ಮ ಬೆಸ್ಟ್ ಫ್ರೆಂಡ್

ಅಮ್ಮ ಬೈದಳು ಎಂದು ದುಃಖದಲ್ಲಿದ್ದ ಅಖಿಲ ತನ್ನ ರ್‍ಯಾಂಕ್ ಸುದ್ದಿ ಕೇಳಿ...
error: Content is protected !!