Sunday, January 19, 2025
Sunday, January 19, 2025

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

Date:

ಉಡುಪಿ, ಡಿ.12: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ, ಅಗತ್ಯ ತುರ್ತು ಸೇವೆಗಳನ್ನು ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದ ಆವರಣದಲ್ಲಿ 24*7ರಂತೆ
ಒದಗಿಸಲಾಗುತ್ತಿದೆ. ತುರ್ತು ಸೇವೆಗಾಗಿ ಸರಕಾರವು ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು ಸದರಿ ವಾಹನಕ್ಕೆ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ನಿರೂಪಾಧಿಕಾರಿ ಅನುರಾಧ ಹಾದಿಮನಿ, ಕಛೇರಿ ಅಧೀಕ್ಷಕರು, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!