Sunday, January 19, 2025
Sunday, January 19, 2025

ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ

ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ

Date:

ಉಡುಪಿ, ಡಿ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಹಿರಿಯ ನಾಗರಿಕರಿಗೆ 07 ತಾಲೂಕುಗಳಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡಿಸೆಂಬರ್ 15 ರಂದು ಕುಂದಾಪುರ ತಾಲೂಕಿನ ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರ, ಡಿ. 17 ರಂದು ಹೆಬ್ರಿ ತಾಲೂಕಿನ ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಡಿ. 24 ರಂದು ಬ್ರಹ್ಮಾವರ ತಾಲೂಕಿನ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ, ಡಿ. 26 ರಂದು ಕಾರ್ಕಳ ತಾಲೂಕಿನ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ಮತ್ತು ಡಿ. 31 ರಂದು ಬೈಂದೂರು ತಾಲೂಕಿನ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 9.30 ರಿಂದ ಅಪರಾಹ್ನ 4.30 ಗಂಟೆಯವರೆಗೆ ಶಿಬಿರಗಳನ್ನು ಏರ್ಪಡಿಸಲಾಗಿದೆ. ಶಿಬಿರಕ್ಕೆ ಹಾಜರಾಗುವ ಹಿರಿಯ ನಾಗರಿಕರು ವಯಸ್ಸಿನ ದಾಖಲೆ, ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಈಗಾಗಲೇ ಕನ್ನಡಕ ಹೊಂದಿರುವ ನಾಗರೀಕರು ತಮ್ಮ ಹಳೆಯ ಕನ್ನಡಕವನ್ನು ಶಿಬಿರಕ್ಕೆ ತರಲು ಆರೋಗ್ಯಾಧಿಕಾರಿಗಳು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿ.ಆರ್.ಡಬ್ಲ್ಯೂ ಅಥವಾ ಇಲಾಖಾ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ. ಸದರಿ ಶಿಬಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!