ಬೆಳ್ಮಣ್, ಡಿ.14: ನಿರಂತರ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ, ಸ್ವಚ್ಛತೆ ಮುಂತಾದ ಹಲವಾರು ಕ್ಷೇತ್ರದಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿರುವ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು 2025ರಲ್ಲಿ ಜರಗಲಿರುವ ಬೆಳ್ಳಿ ಹಬ್ಬ ಸಂಭ್ರಮದ ಪೂರ್ವಭಾವಿ ಸಭೆಯು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮಂದಿರದಲ್ಲಿ ಜರಗಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಬೆಳ್ಳಿ ಹಬ್ಬ ಸಂಭ್ರಮದ ರೂಪುರೇಷೆ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಉಪಾಧ್ಯಕ್ಷ ಸತೀಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಜೊತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಕೋಶಾಧಿಕಾರಿ ಆರತಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ಹರಿಣಿ ಪೂಜಾರಿ, ಪದ್ಮಶ್ರೀ ಪೂಜಾರಿ, ಸುಲೋಚನಾ ಕೋಟ್ಯಾನ್, ಪುಷ್ಪ ಕುಲಾಲ್, ವೀಣಾ ಆಚಾರ್ಯ, ಶಾಂತರಾಮ್ ಕುಲಾಲ್ ಮೊದಲಾದವರಿದ್ದರು.
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಬೆಳ್ಳಿ ಹಬ್ಬದ ಪೂರ್ವಭಾವಿ ಸಭೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಬೆಳ್ಳಿ ಹಬ್ಬದ ಪೂರ್ವಭಾವಿ ಸಭೆ
Date: