Monday, February 24, 2025
Monday, February 24, 2025

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

Date:

ಉಡುಪಿ, ಡಿ.14: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ತೊಡಗಿಸಿಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗಿ ಸಾಧನೆ ಸುಲಭವಾಗುತ್ತದೆ. ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಮೇಲುಗೈ ಸಾಧಿಸಿದಂತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ತೋರುತ್ತಿರುವುದು ಶ್ಲಾಘನೀಯ. ಶಾಲೆ ಹೀಗೆಯೇ ಅಭಿವೃದ್ಧಿಯ ಪಥದಲ್ಲಿ ಸಾಗಲಿ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಪ್ರೌಢಾವಸ್ಥೆಯಲ್ಲಿಯೇ ವಿದ್ಯಾರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ಮುಂದಿನ ಗುರಿಯನ್ನು ನಿರ್ಧರಿಸಿಕೊಂಡು ಅಧ್ಯಯನದಲ್ಲಿ ತೊಡಗಬೇಕು. ಮನಸ್ಸನ್ನು ವಿಚಲಿತಗೊಳಿಸುವ ಸಮೂಹ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳನ್ನು ಅಗತ್ಯವಿದ್ದಷ್ಟು ಮಾತ್ರ ಬಳಸಿಕೊಂಡು ಮುಂದುವರಿಯಬೇಕು. ಗುರಿ ಮುಟ್ಟುವವರೆಗೆ ಸ್ಪರ್ಧಾತ್ಮಕತೆಯನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿದರು.

ನಗರಸಭಾ ಸದಸ್ಯೆ ರಶ್ಮಿ ಸಿ ಭಟ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ ಕೆ., ಮಣಿಪಾಲ ಸೆಲ್ಕೋ ಸಂಸ್ಥೆಯ ನಿರ್ದೇಶಕ ರಘುನಾಥ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಶಾಸಕರು ಉದ್ಘಾಟಿಸಿದರು. ಪ್ರಾಂಶುಪಾಲರಾದ ಜಗದೀಶ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಸದಸ್ಯರಾದ ವಿಶ್ವನಾಥ ಬಾಯರಿ, ಶೇಖರ್ ಕೋಟ್ಯಾನ್, ರತ್ನಾಕರ್, ಎಸ್ ಡಿ ಎಂ ಸಿ ಯ ಅಧ್ಯಕ್ಷೆ ನವ್ಯ ನಾಯಕ್, ತಾರಾದೇವಿ, ನಾಗೇಶ್, ಮುಂತಾದವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ಜಾಂಬವತಿ ಕಲ್ಯಾಣ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಿತು. ಪ್ರಾಂಶುಪಾಲ ಜಗದೀಶ್ ಕುಮಾರ್ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯಸ್ಥೆ ಇಂದಿರಾ ಬಿ ಮತ್ತು ಹಿರಿಯ ಉಪನ್ಯಾಸಕಿ ಡಾ. ಸುಮಾ ವರದಿ ವಾಚನಗೈದರು.‌ ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿ, ವಿಜ್ಞಾನ ಶಿಕ್ಷಕಿ ಜ್ಯೋತಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!