Sunday, January 19, 2025
Sunday, January 19, 2025

ಉಡುಪಿ: ಖಾಯಂ ಜಾಹೀರಾತು ಫಲಕಗಳಲ್ಲಿ ಅನುಮತಿ ಸಂಖ್ಯೆ, ದಿನಾಂಕ ನಮೂದಿಸುವುದು ಕಡ್ಡಾಯ

ಉಡುಪಿ: ಖಾಯಂ ಜಾಹೀರಾತು ಫಲಕಗಳಲ್ಲಿ ಅನುಮತಿ ಸಂಖ್ಯೆ, ದಿನಾಂಕ ನಮೂದಿಸುವುದು ಕಡ್ಡಾಯ

Date:

ಉಡುಪಿ, ಡಿ.17: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಖಾಯಂ ಜಾಹೀರಾತು ಫಲಕಗಳಲ್ಲಿ ನಗರಸಭೆಯಿಂದ ನೀಡಲಾಗುವ ಅನುಮತಿ ಸಂಖ್ಯೆ ಮತ್ತು ದಿನಾಂಕವನ್ನು ದಾಖಲಿಸುವುದು ಕಡ್ಡಾಯವಾಗಿರುತ್ತದೆ. ಆದರೆ ಹಲವಾರು ಖಾಯಂ ಜಾಹೀರಾತುದಾರರು ತಮ್ಮ ಜಾಹೀರಾತು ಫಲಕಗಳಲ್ಲಿ ಅನುಮತಿ ಸಂಖ್ಯೆಯನ್ನು ನಮೂದಿಸದೇ ಇರುವುದು ಕಂಡುಬಂದಿದ್ದು, ಖಾಯಂ ಜಾಹೀರಾತು ಫಲಕಗಳಲ್ಲಿ ಅನುಮತಿ ಸಂಖ್ಯೆ ಮತ್ತು ದಿನಾಂಕವನ್ನು ನಮೂದಿಸದೇ ಇರುವವರು ಡಿಸೆಂಬರ್ 23 ರ ಒಳಗಾಗಿ ದಾಖಲಿಸಬೇಕು. ದಾಖಲಿಸದೇ ಇರುವ ಜಾಹೀರಾತು ಫಲಕಗಳನ್ನು ಅನಧಿಕೃತವೆಂದು ಭಾವಿಸಿ, ನಗರಸಭೆ ವತಿಯಿಂದ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!