Monday, February 24, 2025
Monday, February 24, 2025

ಡಿ.22: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ; 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಡಿ.22: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ; 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Date:

ಕಾರ್ಕಳ ಡಿ. 19: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ 22 ಡಿಸೆಂಬರ್ ೨೦೨೪ ಆದಿತ್ಯವಾರದಂದು ನಡೆಯಲಿದೆ. ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. ಫೌಂಡೇಶನ್‌ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಈ ಸಂದರ್ಭದಲ್ಲಿ ಪ್ರತಿ ಎಂ.ಬಿ.ಬಿ.ಎಸ್ ಸೀಟ್‌ಗೆ (155) ರೂ.2000/-ದಂತೆ ಭಾರತೀಯ ಸೇನೆಗೆ ರೂ. 3,10,000/- ವನ್ನು ದೇಣಿಗೆಯಾಗಿ ನೀಡಲಾಗುವುದು. ಒಟ್ಟು 3 ನೇ ಹಂತದಲ್ಲಿ ಇದೀಗ 7,47,500 ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಗುವುದು.

ಅಧ್ಯಕ್ಷತೆಯನ್ನು ಶಾಸಕ ವಿ.ಸುನಿಲ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ. ಆರ್. ಜಿ. ಗ್ರೂಪ್‌ಗಳ ಸಂಸ್ಥಾಪಕ ಹಾಗೂ ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ತಾಂತ್ರಿಕ ಶಿಕ್ಷಣದ ನಿರ್ದೇಶಕರಾದ ಪ್ರಸನ್ನ ಹೆಚ್., ಐ.ಎ.ಎಸ್. ಹಾಗೂ ಸಂಸ್ಥೆಯ ಪೂರ್ವ ವಿದ್ಯಾರ್ಥಿ ಐ.ಎಂಎಸ್. ಬನಾರಸ್ ವಾರಣಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಗೌತಮ್‌ ಭಟ್ ಎಂ.ಬಿ.ಬಿ.ಎಸ್. ಎಂ.ಎಸ್. ಎಂ.ಸಿಹೆಚ್ (ಸರ್ಜಿಕಲ್‌ ಆಂಕೋಲಜಿ) ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!