Wednesday, January 22, 2025
Wednesday, January 22, 2025

ವಿಶ್ವಕರ್ಮ ಯೋಜನೆ: ನಿರ್ಮಲಾ ಸೀತಾರಾಮನ್‌ರವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ

ವಿಶ್ವಕರ್ಮ ಯೋಜನೆ: ನಿರ್ಮಲಾ ಸೀತಾರಾಮನ್‌ರವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ

Date:

ಉಡುಪಿ, ಡಿ.20: ವಿಶ್ವಕರ್ಮ ಯೋಜನೆಗೆ ಕರ್ನಾಟಕ ರಾಜ್ಯದಲ್ಲಿ 11 ಲಕ್ಷಕ್ಕೂ ಮಿಕ್ಕ ಅರ್ಜಿ ಸಲ್ಲಿಸಿದ್ದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಈಗಾಗಲೇ 7 ಸಾವಿರಕ್ಕೂ ಮಿಕ್ಕ ಫಲಾನುಭವಿಗಳು ತರಬೇತಿ ಪಡೆದಿದ್ದು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ವಿಶ್ವಕರ್ಮ ಯೋಜನೆಯ ಕರಕುಶಲ ಕರ್ಮಿಗಳಿಗೆ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಸಲ್ಲಿಸಿ ಚರ್ಚಿಸಿದರು.

ವಿಶ್ವಕರ್ಮ ಯೋಜನೆಗೆ ಕೆಲವು ರಾಷ್ಟ್ರೀಕೃತ ಬ್ಯಾಂಕುಗಳು ಮಾತ್ರ ಉತ್ತಮವಾಗಿ ಸ್ಪಂದಿಸುತ್ತಿದ್ದರೂ ಇತರ ಕೆಲವು ಬ್ಯಾಂಕಿನ ಬ್ರಾಂಚ್ ಗಳಲ್ಲಿ ನಿಗದಿತ 250 ರೂಪಾಯಿಗಿಂತ ಹೆಚ್ಚು ಮೊತ್ತದ ಅಫೀತವಿತ್ ಕೇಳುವುದು, ಕೋವಿಡ್ ಸಂಕಷ್ಟಕಾಲದಲ್ಲಿ ತೆಗೆದು ಸಾಲ ಪಾವತಿ ಮಾಡಿದ್ದರೂ ಸಿಬಲ್ ಉಲ್ಲೇಖ ಮಾಡಿ ಸಾಲ ನಿರಾಕರಿಸುವುದು, ಕೆಲವೆಡೆ ಜಿ.ಎಸ್.ಟಿ ಬಿಲ್ಲುಗಳನ್ನು ಕೇಳುತ್ತಾ ಇರುವುದರಿಂದ ವಿಶ್ವಕರ್ಮ ಕುಲ ಕಸುಬುದಾರರು ಸಾಲಕ್ಕಾಗಿ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಿಗೆ ವಿಳಂಬವಿಲ್ಲದೆ ಕೇಂದ್ರ ಸರಕಾರದ ಭದ್ರತೆ ಹೊಂದಿರುವ ವಿಶ್ವಕರ್ಮ ಯೋಜನೆಯ ಅರ್ಜಿದಾರರಿಗೆ ಸಾಲ ನೀಡುವಂತೆ ನಿರ್ದೇಶನ ನೀಡಬೇಕೆಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.

ಮನವಿಯನ್ನು ಆಲಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ತಕ್ಷಣ ಕ್ರಮ ಜರುಗಿಸಿ ಸಾಲ ಸೌಲಭ್ಯ ನೀಡಲು ಆದೇಶಿಸುವುದಾಗಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!