Sunday, February 23, 2025
Sunday, February 23, 2025

ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಜಿಲ್ಲಾಧಿಕಾರಿ

ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಜಿಲ್ಲಾಧಿಕಾರಿ

Date:

ಉಡುಪಿ, ಡಿ.21: ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಸೇವಾ ಕೇಂದ್ರಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 208 ಕ್ಕೂ ಹೆಚ್ಚು ಗ್ರಾಮ ಒನ್ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಿದಂತಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಇಲಾಖೆಗಳ ಸಮನ್ವಯೊಂದಿಗೆ ಇನ್ನಷ್ಟು ಉತ್ಸುಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಆಯುಷ್ಮಾನ್ ಭಾರತ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಮತ್ತಿತರರ ಸರ್ಕಾರ ಯೋಜನೆಗಳಿಗೆ ಗ್ರಾಮ ಒನ್ ನಿರ್ವಾಹಕರುಗಳು ಸಾರ್ವಜನಿಕರಿಂದ ಹೆಚ್ಚುವರಿ ಶುಲ್ಕವನ್ನು ಪಡೆಯದೇ ಸರ್ಕಾರ ನಿಗಧಿಪಡಿಸಿದ ಶುಲ್ಕವನ್ನು ಪಡೆಯುವ ಮೂಲಕ ಸಾರ್ವಜನಿಕರಿಗೆ ತಮ್ಮ ಪ್ರಾಮಾಣಿಕ ಸೇವೆಯನ್ನು ನೀಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಲು ಅನುಕೂಲವಾಗುವಂತೆ ಗ್ರಾಮ ಮಟ್ಟದಲ್ಲಿ ಸ್ಥಾಪನೆಯಾಗಿರುವ ಗ್ರಾಮ ಒನ್ ಸೆಂಟರ್‌ಗಳ ಲಾಭ ಪಡೆಯಬಹುದಾಗಿದೆ ಎಂದರು. ಗ್ರಾಮ ಒನ್‌ನ ಜಿಲ್ಲಾ ಯೋಜನಾ ವ್ಯವಸ್ಥಾಪಕ ನವೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ವಾರದ ಏಳು ದಿನಗಳು ಸಹ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಒನ್ ಕೇಂದ್ರಗಳಲ್ಲಿ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು. ಉತ್ತಮ ಸಮಾಜ ಸೇವೆಗಾಗಿ ನಂದಾ ಕಿಶೋರ್ ಬ್ರಹ್ಮಾವರ ಇವರನ್ನು ಸನ್ಮಾಯಿಸಲಾಯಿತು.

ಇಡಿಸಿಎಸ್ ನಿರ್ದೇಶನಾಲಯದ ಉಪ ನಿರ್ದೇಶಕ ಮಹವೀರ್, ಗ್ರಾಮ ಒನ್ ಕೇಂದ್ರಗಳ ಮಾಲೀಕರು, ನಿರ್ವಾಹಕರು, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುಷ್ಮಾ ಉದ್ಯಾವರ ಸ್ವಾಗತಿಸಿ, ವಿಕಾಸ್ ಕಡೆಕಾರ್ ನಿರೂಪಿಸಿ, ಗಣೇಶ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!