ಮಲ್ಪೆ: 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಆಶಯದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಗ್ರಾಮ ಪಂಚಾಯತ್ ತೆಂಕನಿಡಿಯೂರು ಸಂಯುಕ್ತ ಆಶ್ರಯದಲ್ಲಿ ಮಾತನಾಡು ಕನ್ನಡ ಕಾರ್ಯಕ್ರಮದಲ್ಲಿ ಸಾಮೂಹಿಕ ಗೀತೆ ಗಾಯನ ನಡೆಯಿತು.
ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿರುವ ಐದು ದಿನಗಳ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣನಾಥ ಎಕ್ಕಾರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ
ಸ್ವಾಗತಿಸಿದರು.
ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳೊಂದಿಗೆ ಪಂಚಾಯತ್ ಸದಸ್ಯರು ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಾಂಸ್ಕೃತಿಕ ಸಂಘದ ಸಂಚಾಲಕರಾದ ರತ್ನಮಾಲಾ ವಂದಿಸಿದರು. ಶರ್ಮಿಳಾ ಹಾರಾಡಿ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ ಕನ್ನಡ ಮಾತನಾಡು ಸ್ಪರ್ಧೆ, ರಸಪ್ರಶ್ನೆ, ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ 1 ರಂದು ಸಮಾರೋಪ ಕಾರ್ಯಕ್ರಮದಲ್ಲಿ ವಿದ್ವಾಂಸರಾದ ಸುಜಯೇಂದ್ರ ಹಂದೆ ಉಪನ್ಯಾಸ ನೀಡಲಿದ್ದಾರೆ.