Friday, January 24, 2025
Friday, January 24, 2025

ಸ್ವಚ್ಛತಾ ಅಭಿಯಾನಕ್ಕೆ ಪಂಚವರ್ಣ ಹೊಸ ಭಾಷ್ಯ: ವಿದ್ಯಾ ಎಸ್ ಸಾಲಿಯಾನ್

ಸ್ವಚ್ಛತಾ ಅಭಿಯಾನಕ್ಕೆ ಪಂಚವರ್ಣ ಹೊಸ ಭಾಷ್ಯ: ವಿದ್ಯಾ ಎಸ್ ಸಾಲಿಯಾನ್

Date:

ಕೋಟ, ಡಿ.23: ಸ್ವಚ್ಛತಾ ಅಭಿಯಾನದಲ್ಲಿ ಪಂಚವರ್ಣ ಸಂಸ್ಥೆ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯುತ್ತಿದೆ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾ ಎಸ್ ಸಾಲಿಯಾನ್ ಹೇಳಿದರು. ಕೋಟತಟ್ಟು ಪಡುಕರೆ ಬೀಚ್‌ನಲ್ಲಿ ಕೋಟ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಸೀನಿಯರ್ ಲಿಜನ್ ಕೋಟ ಇವರುಗಳ ಸಹಯೋಗದೊಂದಿಗೆ ಪರಿಸರಸ್ನೇಹಿ ಅಭಿಯಾನ ೨೩೫ನೇ ಭಾನುವಾರದ ಸಂಭ್ರಮದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣದ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಸಂಚಾಲಕಿ ಸುಜಾತ ಬಾಯರಿ, ಮುಂತಾದವರು ಇದ್ದರು. ಮಾಜಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!