Tuesday, December 24, 2024
Tuesday, December 24, 2024

ಚಕೋರ – ಸಾಹಿತ್ಯ ವಿಚಾರ ವೇದಿಕೆ ಉಡುಪಿ ಉದ್ಘಾಟನೆ

ಚಕೋರ – ಸಾಹಿತ್ಯ ವಿಚಾರ ವೇದಿಕೆ ಉಡುಪಿ ಉದ್ಘಾಟನೆ

Date:

ಹಿರಿಯಡ್ಕ, ಡಿ.23: ನಮ್ಮ ಪ್ರಜಾಸತ್ತೆಯ ಬದುಕಿಗೆ ದಾರಿದೀಪವಾದ ಸಂವಿಧಾನವನ್ನು ರಚಿಸಿಕೊಟ್ಟ ಬಾಬಾಸಾಹೇಬ್ ಅಂಬೇಡ್ಕರರು ಈ ನೆಲದ ರೋಗಗಳ ಮೂಲವಾದ ಜಾತಿಯ ವಿನಾಶದಲ್ಲೇ ಈ ದೇಶದ ಏಳಿಗೆಯಿದೆಯೆಂದರೋ, ಅಂತೆಯೇ ಕನ್ನಡದ ನಿಜದನಿಯಾದ ಕುವೆಂಪು ಕೂಡಾ ‘ಚಾತುರ್ವಣ್ಯವನ್ನು ತಿದ್ದುವುದಲ್ಲ ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು’ ಎಂದೇ ಪ್ರತಿಪಾದಿಸಿದರು ಎಂದು ವಿಮರ್ಶಕ ಮುರಳೀಧರ ಉಪಾಧ್ಯಾಯ ಹಿರಿಯಡಕ ಹೇಳಿದರು. ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮಾಡುವ ಮೂಲಕ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇನಲ್ಲಿ ಆಯೋಜಿಸಿದ ‘ಚಕೋರ – ಸಾಹಿತ್ಯ ವಿಚಾರ ವೇದಿಕೆ ಉಡುಪಿ’ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಕುವೆಂಪು ಕೃತಿಗಳಲ್ಲಿ ಸಮಾನತೆಯ ಆಶಯ’ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದ ಡಾ. ರೇಖಾ ವಿ ಬನ್ನಾಡಿ ಅವರು, ‘ಜಲಗಾರ’ ನಾಟಕ ಪಠ್ಯವನ್ನು ವಿಶ್ಲೇಷಿಸುತ್ತಾ, ಶ್ರೀಕುವೆಂಪು ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದ ಪಂಪನಿಂದ ತೊಡಗಿ, ಕಾಯಕ ಸಮಾನತೆಯ ಮೂಲಕವೇ ಮನುಷ್ಯ ಸಮಾನತೆಯನ್ನು ಸಾರಿದ ಶರಣರು, ತತ್ವಪದಕಾರರುಗಳ ನಿಜವಾರಸುದಾರರು ಮಾತ್ರವಲ್ಲ ನೆಲದ ಸಮುದಾಯಗಳೆಲ್ಲವನ್ನೂ ತಾಯ್ತನದ ಕರುಳಿಂದಲೇ ಪ್ರೀತಿಸಿದ ಗಾಂಧೀ ಮತ್ತು ಅಂಬೇಡ್ಕರ್ ಬಯಸಿದ ಅರ್ಥಪೂರ್ಣ ಪ್ರಜಾಸತ್ತೆಯ ಕನಸನ್ನು ಕಂಡ ಮನುಷ್ಯಲೋಕದ ಮಹತ್ವದ ಆಸ್ತಿಯೂ ಹೌದೆಂದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಹಿರಿಯಡಕ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ. ಜಯಪ್ರಕಾಶ ಶೆಟ್ಟಿಯವರು ಅಕಾಡೆಮಿಯ ಕನಸಿನ ಕೂಸಾದ ‘ಚಕೋರ’ದ ಕಾರ‍್ಯಚಟುವಟಿಕೆಗಳ ಸ್ವರೂಪ ಮತ್ತು ಆಶಯಗಳನ್ನು ಪರಿಚಯಿಸಿ, ಅದು ಕುವೆಂಪು ಹುಟ್ಟಿದ ತಿಂಗಳಾದ್ದರಿಂದ ಅವರ ನುಡಿನಮನದೊಂದಿಗೇ ಆರಂಭಗೊಳ್ಳುತ್ತಿದೆ ಎಂದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್ ಅಧ್ಯಕ್ಷತೆ ವಹಿಸಿದ್ದ ಕಾರ‍್ಯಕ್ರಮದಲ್ಲಿ ಉಪಪ್ರಾಂಶುಪಾಲ ಪ್ರಕಾಶ್ ಪ್ರಭು, ವಿದ್ಯಾರ್ಥಿ ನಾಯಕ ಪ್ರಶಾಂತ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ದೇವದಾಸ ಪ್ರಭು ವಂದಿಸಿದರು. ಉಡುಪಿ ಜಿಲ್ಲೆಯ ಚಕೋರ ಬಳಗದ ಸಂಚಾಲಕಿ ಶಾಲಿನಿ ಯು. ಬಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಥೊಲಿಕ್ ಸಭಾ ಉಡುಪಿ ಪ್ರದೇಶ: ಅನಾಥಾಶ್ರಮದಲ್ಲಿ ಕ್ರಿಸ್ಮಸ್ ಆಚರಣೆ

ಬ್ರಹ್ಮಾವರ, ಡಿ.23: ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಬ್ರಹ್ಮಾವರ ಸಮೀಪದ...

ಉಡುಪಿ: ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು ಮಾಹಿತಿ

ಉಡುಪಿ, ಡಿ.23: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ...

ಉದ್ದಿಮೆದಾರರು ಜಿಲ್ಲೆಯಲ್ಲಿ ಕಿರು ಉದ್ಯಮಗಳ ಸ್ಥಾಪನೆಗೆ ಮುಂದಾಗಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, ಡಿ.23: ರೈತರನ್ನು ಉದ್ಯಮಿಗಳನ್ನಾಗಿ ಮಾಡಿ, ಅವರ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ,...

ರಾಷ್ಟ್ರೀಯ ಹೆದ್ದಾರಿಯಲ್ಲೇ ಮಣ್ಣಿನ ರಾಶಿ; ನಿರ್ಲಕ್ಷ್ಯದ ಪರಮಾವಧಿಗೆ ಇದೇ ಸಾಕ್ಷಿ

ಉಡುಪಿ, ಡಿ.23: (ಉಡುಪಿ ಬುಲೆಟಿನ್ ವಿಶೇಷ ವರದಿ) ಸುಗಮ ಸಂಚಾರಕ್ಕೆ ಜಾಗ...
error: Content is protected !!