Monday, February 24, 2025
Monday, February 24, 2025

ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಪ್ರತೀಕ: ಪ್ರಶಾಂತ ನೀಲಾವರ

ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಪ್ರತೀಕ: ಪ್ರಶಾಂತ ನೀಲಾವರ

Date:

ಉಡುಪಿ, ಡಿ.24: ವಿಶ್ವದ ಚರಿತ್ರೆಯಲ್ಲಿ ಮಾನವ ಹಕ್ಕುಗಳ ಹೋರಾಟಕ್ಕೆ ಬಹುದೊಡ್ಡ ಇತಿಹಾಸವಿದೆ. ಇಂದು ನಾವು ಬದುಕುವ ನೆಮ್ಮದಿಯ ಬದುಕಿಗೆ ಮಾನವ ಹಕ್ಕುಗಳೇ ತಳಹದಿ. ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ನೈಜ ಪ್ರತೀಕ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ನೀಲಾವರ ಹೇಳಿದರು. ಅವರು ಸೋಮವಾರ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ರೆಡ್ ರಿಬ್ಬನ್ ಕ್ಲಬ್ ಕಿರಿಯ ಯುವ ರೆಡ್‌ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಮಾನವ ಹಕ್ಕುಗಳ ಕುರಿತಾದ ಅರಿವು ಇಂದು ಅತೀ ಅಗತ್ಯವಾಗಿದೆ. ಈ ದೃಷ್ಟ್ಟಿಯಿಂದ ಇಂತಹ ಕಾರ್ಯಕ್ರಮಗಳು ಮಹತ್ವವಾದುದು ಎಂದರು. ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೆಡ್‌ಕ್ರಾಸ್ ಖಜಾಂಚಿ ರಮಾದೇವಿ, ನಿಕಟಪೂರ್ವ ಖಜಾಂಚಿ ಚಂದ್ರಶೇಖರ್, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ರೆಡ್ ಕ್ರಾಸ್ ಸ್ವಯಂಸೇವಕಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ಪ್ರಿಯಕಾರಿಣಿ ಜೈನ್ ನಿರೂಪಿಸಿ, ರೆಡ್ ರಿಬ್ಬನ್ ಕ್ಲಬ್ ಸಂಯೋಜಕಿ ಸುಮನ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!