ಕಾಪು, ಡಿ.26: ಮಹಾದೇವಿ ಪ್ರೌಢಶಾಲಾ ಶೌಚಾಲಯ ನಿರ್ಮಾಣಕ್ಕೆ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ಅನುದಾನದಲ್ಲಿ 15 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಕಾಪು ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಸದಸ್ಯರಾದ ಸುರೇಶ್ ದೇವಾಡಿಗ, ಮಹಾದೇವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮಹಾದೇವಿ ಪ್ರೌಢಶಾಲಾ ಶೌಚಾಲಯ ನಿರ್ಮಾಣಕ್ಕೆ ಚಾಲನೆ
ಮಹಾದೇವಿ ಪ್ರೌಢಶಾಲಾ ಶೌಚಾಲಯ ನಿರ್ಮಾಣಕ್ಕೆ ಚಾಲನೆ
Date: