ಬೆಳ್ಮಣ್, ಡಿ.27: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ೨೦೨೫ರ ಫೆಬ್ರವರಿ ೨೮ ಮತ್ತು ಮಾರ್ಚ್ ೦೧ರಂದು ಜರಗಲಿರುವ ರಜತ ಸಂಭ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರು ರಜತ ಸಂಭ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಸಮಾರಂಭಕ್ಕೆ ಶುಭ ಹಾರೈಸಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು.
ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತಂತ್ರಿಗಳಾದ ಸತೀಶ್ ತಂತ್ರಿ, ಸುಮಧ್ವ ಭಟ್, ಉದ್ಯಮಿ ಸದಾಶಿವ ಪೈ ಬೆಳ್ಮಣ್ಣು, ಕರುಣಾಕರ ಉಡುಪಿ, ರಘುನಾಥ ನಾಯಕ್ ಉಪಸ್ಥಿತಿತರಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಜೊತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಕೋಶಾಧಿಕಾರಿ ಆರತಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ವೀಣಾ ಆಚಾರ್ಯ, ಯೋಗೀಶ್ ಆಚಾರ್ಯ, ಪ್ರದೀಪ್ ಸುವರ್ಣ ಮೊದಲಾದವರಿದ್ದರು.