ಕಾರ್ಕಳ, ಡಿ.27: ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ, ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಗಳ ಪುತ್ರ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ ಮೋಹನ್ ಕಿಣಿ ಮತ್ತು ಶುಭಾ ಕಿಣಿ ದಂಪತಿಗಳ ಪುತ್ರಿ ಸ್ವಾತಿ ಕಿಣಿ ಮತ್ತು ಬೈಲೂರು ರಮೇಶ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ದಂಪತಿಗಳ ಪುತ್ರಿ ರಕ್ಷಾ ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಇವರ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹಾಗೂ ಜ್ಞಾನಸುಧಾ ಪರಿವಾರವು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿರುತ್ತಾರೆ.
ಸಿ.ಎ ಅಂತಿಮ ಪರೀಕ್ಷೆ: ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ
ಸಿ.ಎ ಅಂತಿಮ ಪರೀಕ್ಷೆ: ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ
Date: