ಉಡುಪಿ, ಡಿ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025 ‘ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು. ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಫೆಬ್ರವರಿಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.
ನವೀನ್ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪುರಸ್ಕಾರ 2025’
ನವೀನ್ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪುರಸ್ಕಾರ 2025’
Date: