ಗಂಗೊಳ್ಳಿ, ಡಿ.30: ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ.. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ ಗುರಿಯ ಕಡೆ ನಾವು ಮುಂದುವರಿಯಬೇಕು ಎಂದು ಅವರು ಅಭಿಪ್ರಾಯಪಟ್ಟರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮೌಲಾನ ಇಬ್ರಾಹಿಂ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ 94 ವಿದ್ಯಾರ್ಥಿಗಳಿಗೆ 6.50 ಲಕ್ಷ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಂಚಾಲಕ ಎನ್ ಸದಾಶಿವ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್ ನ ಸದಸ್ಯ ರಾಮನಾಥ ನಾಯಕ್ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಥಾಮಸ್ ಪಿ. ಎ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಯು ವೆಂಕಟೇಶಮೂರ್ತಿ, ಸುಗುಣ ಆರ್ ಕೆ ನಮಿತಾ ಶೆಣೈ ಸಹಕರಿಸಿದರು. ಸಪೇಕ್ಷಾ ಮತ್ತು ಶ್ರೀನಿಧಿ ಪ್ರಾರ್ಥಿಸಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ವಂದಿಸಿದರು.