ಬೆಂಗಳೂರು, ಡಿ.30: ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು. ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ.
ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ ಎಂದು ಸಿಎಂ ಹೇಳಿದ್ದಾರೆ.