ಕಾಪು, ಡಿ.30: ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಯಿತು. ನಮೂನೆ 53 ಅಡಿಯಲ್ಲಿ ಸಲ್ಲಿಸಿದ 6 ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಪ್ರತಿಭಾ, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.