Monday, January 6, 2025
Monday, January 6, 2025

ವಿಕಲಚೇತನರ ರಿಯಾಯಿತಿ ಬಸ್‌ ಪಾಸ್: ಅರ್ಜಿ ಆಹ್ವಾನ

ವಿಕಲಚೇತನರ ರಿಯಾಯಿತಿ ಬಸ್‌ ಪಾಸ್: ಅರ್ಜಿ ಆಹ್ವಾನ

Date:

ಉಡುಪಿ, ಡಿ.31: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024 ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿದ್ದು, 2025 ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01 ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025 ರ ಫೆಬ್ರವರಿ 28 ರ ವರೆಗೆ ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೃತ ಬಾಣಂತಿಯರ ಕುಟುಂಬಕ್ಕೆ ತಲಾ ರೂ. 25 ಲಕ್ಷ ಪರಿಹಾರ ಘೋಷಿಸಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಶಿವಮೊಗ್ಗ, ಜ.5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇದ್ದರೆ ತಡಮಾಡದೆ ಮೃತ...

ಶಕ್ತಿ ಯೋಜನೆಯ ಬಗ್ಗೆ ತಿಳಿಯಲು ರಾಜ್ಯಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶ ಸಚಿವರ ತಂಡ

ಬೆಂಗಳೂರು, ಜ.5: ಆಂಧ್ರಪ್ರದೇಶ ಸರ್ಕಾರದ ಸಾರಿಗೆ, ಯುವಜನ & ಕ್ರೀಡಾ ಸಚಿವ...

ನಾಲ್ಕು ದಶಕಗಳ ದಾಖಲೆಯನ್ನು ಮುರಿದಿದ ಟಾಟಾ ಮೋಟಾರ್ಸ್; ಮಾರುತಿ ಸುಜುಕಿಯ ವ್ಯಾಗನ್ ಆರ್ ಮೀರಿಸಿ ಅಗ್ರಸ್ಥಾನದಲ್ಲಿ ‘ಪಂಚ್’

ನವದೆಹಲಿ, ಜ.5: ಟಾಟಾ ಮೋಟಾರ್ಸ್ ಅಂತಿಮವಾಗಿ ಮಾರುತಿ ಸುಜುಕಿಯನ್ನು ಹಿಂದಿಕ್ಕಿ ನಾಲ್ಕು...

ಕೋಸ್ಟ್ ಗಾರ್ಡ್‌ನ ಲಘು ಹೆಲಿಕಾಪ್ಟರ್ ಪತನ; ಮೂರು ಸಾವು

ಪೋರಬಂದರ್‌, ಜ.5: ಭಾರತೀಯ ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ (ಎಎಲ್‌ಹೆಚ್)...
error: Content is protected !!