Monday, February 24, 2025
Monday, February 24, 2025

ತೆಂಕನಿಡಿಯೂರು ಕಾಲೇಜು: ರಸಋಷಿ ಕುವೆಂಪು ಜನ್ಮದಿನಾಚರಣೆ

ತೆಂಕನಿಡಿಯೂರು ಕಾಲೇಜು: ರಸಋಷಿ ಕುವೆಂಪು ಜನ್ಮದಿನಾಚರಣೆ

Date:

ಮಲ್ಪೆ, ಜ.7: ಕುವೆಂಪುರವರಿಗೆ ಬಹುವಾಗಿ ಪ್ರಭಾವಿಸಿದ್ದು ನಿಸರ್ಗ, ವೈಚಾರಿಕತೆ ಮತ್ತು ಮಾನವನ ಘನತೆ. ಕುವೆಂಪು ತನ್ನ ಕಾಲದ ಸಾಂಸ್ಕೃತಿಕ ತುರ್ತನ್ನು ಅರಿತುಕೊಂಡು ತಮ್ಮ ಸಾಹಿತ್ಯದಲ್ಲಿ ಅದನ್ನು ಅಳವಡಿಸಿಕೊಂಡವರು. ತಮ್ಮ ಜೀವನದುದ್ದಕ್ಕೂ ಹೇಳಿಕೊಂಡು ಬಂದಂತಹ ಸಾಮಾಜಿಕ ಮೌಲ್ಯಗಳನ್ನು ಅವರು ತಮ್ಮ ಬದುಕಿನಲ್ಲಿ ಅನುಷ್ಠಾನಗೊಳಿಸಿದಂತಹ ನಡವಳಿಕೆಯ ಸಂಹಿತೆಯನ್ನು ಅರ್ಥಮಾಡಿಕೊಳ್ಳಬೇಕಾದರೆ ಅದು ಮೊದಲು ನಮ್ಮ ಯುವ ತಲೆಮಾರಿಗೆ ತಲುಪಬೇಕೆಂದು ಡಾ. ರೇಖಾ ವಿ. ಬನ್ನಾಡಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಕನ್ನಡ ವಿಭಾಗವು, ಐಕ್ಯೂಎಸಿಯೊಂದಿಗೆ ಆಯೋಜಿಸಿದ ರಸಋಷಿ ಕುವೆಂಪು ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ಕುವೆಂಪು ಅವರ ಸಾಹಿತ್ಯದ ಆದರ್ಶವನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ, ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ಕನ್ನಡ ವಿಭಾಗದ ಉಪನ್ಯಾಸಕರುಗಳಾದ ಶರಿತಾ, ಸಂಧ್ಯಾರಾಣಿ, ಭಾರತಿ, ಅರ್ಚನಾ ಉಪಸ್ಥಿತರಿದ್ದರು. ಗ್ರಂಥಪಾಲರಾದ ಕೃಷ್ಣ ಅವರು ಕುವೆಂಪು ಗೀತ ಗಾಯನ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ರತ್ನಮಾಲಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಿನಿ ಯು.ಬಿ. ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!