ಉಡುಪಿ, ಜ.7: ಉಡುಪಿ ನಗರಸಭೆಯ ಕಿನ್ನಿಮುಲ್ಕಿ ವಾರ್ಡಿನಲ್ಲಿ ಶಾಸಕ ಯಶ್ಪಾಲ್ ಸುವರ್ಣ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಕಿನ್ನಿಮುಲ್ಕಿ ವಾರ್ಡಿನ ಬೇಡಿಕೆ ಹಾಗೂ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆದ್ಯತೆಯ ಮೇರೆಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷರಾದ ರವಿ ಶೆಟ್ಟಿಗಾರ್, ದೇವದಾಸ್ ಶೆಟ್ಟಿಗಾರ್, ನಗರಸಭಾ ಸದಸ್ಯರಾದ ಟಿ ಜಿ ಹೆಗ್ಡೆ, ಹರೀಶ್ ಶೆಟ್ಟಿ, ಗಿರೀಶ್ ಅಂಚನ್ ಮುಂತಾದವರು ಉಪಸ್ಥಿತರಿದ್ದರು.