Thursday, January 9, 2025
Thursday, January 9, 2025

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

Date:

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ಗ್ರಾಹಕರಲ್ಲಿ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾಮಟ್ಟದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಪ್ರಗತಿ ಪರ ರೈತರು ಮತ್ತು ಮಾರುಕಟ್ಟೆದಾರರ ಸಹಯೋಗದೊಂದಿಗೆ ಸಿರಿಧಾನ್ಯ ಹಬ್ಬ ಕಾರ್ಯಕ್ರಮವು ಜನವರಿ 11 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ಹಾಗೂ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಜನವರಿ 18 ರಂದು ಸಂಜೆ 4.30 ಕ್ಕೆ ಮಲ್ಪೆ ಕಡಲ ತೀರದಲ್ಲಿ ನಡೆಯಲಿದೆ.

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ನಿಯೋಜಿತ ಸ್ಥಳಗಳಲ್ಲಿ ಮೇಲ್ಕಂಡ ದಿನಾಂಕ ಹಾಗೂ ಸಮಯಕ್ಕೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 4 ಮಂದಿ ಸಾವು, ಹಲವರಿಗೆ ಗಾಯ

ಯು.ಬಿ.ಎನ್.ಡಿ., ಜ.8: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವೈಕುಂಠ ದ್ವಾರ...

ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ...

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ...
error: Content is protected !!