Saturday, September 21, 2024
Saturday, September 21, 2024

ಕನ್ನಡವೇ ಕನ್ನಡಿಗರ ಜೀವನಾಡಿ: ಸತೀಶ್ ನಾಯ್ಕ್

ಕನ್ನಡವೇ ಕನ್ನಡಿಗರ ಜೀವನಾಡಿ: ಸತೀಶ್ ನಾಯ್ಕ್

Date:

ಕೋಟ: “ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು” ಎಂದು ಕವಿ ಕುವೆಂಪು ಕನ್ನಡದ ಭಾಷೆಯ ಮಹತ್ವವನ್ನು ಸಾರಿದ್ದಾರೆ. ಕನ್ನಡಿಗರಾದ ನಾವುಗಳು ಕನ್ನಡ ಭಾಷೆಯ ಉಳಿವು ಮತ್ತು ಬೆಳೆಸುವುದಕ್ಕೆ ಪಣ ತೊಟ್ಟು ಕನ್ನಡವನ್ನು ಪ್ರಪಂಚ ಉದ್ದಗಲಕ್ಕೂ ಪಸರಿಸುವ ಕೆಲಸವಾಗಬೇಕು.

ಕನ್ನಡ ನಮ್ಮ ದಿನನಿತ್ಯ ಮಾತನಾಡುವ ಭಾಷೆಯಾಗಿರದೇ ನಮ್ಮ ಎಲ್ಲಾ ಕಾಯಕದಲ್ಲೂ ಬಳಸಿಕೊಳ್ಳಬೇಕು. ಕನ್ನಡವೇ ಕನ್ನಡಿಗರ ಜೀವನಾಡಿಯಾಗಿದೆ ಎಂದು ಮಹಾತ್ಮ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಸತೀಶ್
ನಾಯ್ಕ್ ಅವರು ಹೇಳಿದರು.

ಅವರು ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಯ್ಬ್ರಕಟ್ಟೆ ಶ್ರೀ ವಿನಾಯಕ ಯುವಕ ಮಂಡಲ ಸಾಯ್ಬ್ರಕಟ್ಟೆ –ಯಡ್ತಾಡಿ ಇವರ ಸಹಯೋಗದಲ್ಲಿ ನಡೆದ ಮಾತಾಡ್ ಮಾತಾಡ್ ಕನ್ನಡ –ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರವನ್ನು ಶ್ರೀ ವಿನಾಯಕ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ದೇವಾಡಿಗ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಹಾಗೂ ಕನ್ನಡ ನಾಡು ನುಡಿಯ ರಕ್ಷಣೆ ಸಂಕಲ್ಪವನ್ನು ಶಿಕ್ಷಕ ಗಣೇಶ್ ನಾಯಕ್ ಶಿರಿಯಾರ ಅವರು ನೆರವೇರಿಸಿದರು.

ಯುವಕ ಮಂಡಲದ ಕಾರ್ಯದರ್ಶಿ ಪ್ರಭಾಕರ ಪೂಜಾರಿ, ಮೆಟ್ರಿಕ್ ಪೂರ್ವ ಬಾಲಕಿರ ವಸತಿ ನಿಲಯದ ಮೇಲ್ವಿಚಾರಕಿ ಜಯಂತಿ, ಶಾಲೆಯ ಹಳೆ ವಿದ್ಯಾರ್ಥಿ ತೇಜ ನಾಯ್ಕ್, ಶಾಲೆಯ ಅಧ್ಯಾಪಕ ವೃಂದ, ಯುವಕ ಮಂಡಲದ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!