Saturday, October 3, 2026
Saturday, October 3, 2026

ಮಣಿಪಾಲ ಜ್ಞಾನಸುಧಾ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಲಿಶಾ ದ್ವಿತೀಯ

ಮಣಿಪಾಲ ಜ್ಞಾನಸುಧಾ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಲಿಶಾ ದ್ವಿತೀಯ

Date:

ಮಣಿಪಾಲ, ಜ.9: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜನವರಿ ೮ರಂದು ತುಮಕೂರಿನ ಎಂಪ್ರೆಸ್ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2024- 25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಿಶಾ ಕ್ಲಿಯಾಂತ ರ‍್ಬೋಜಾ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ಮೂಡುಬೆಳ್ಳೆಯ ಎಡ್ವಿನ್ ರ‍್ಬೋಜಾ ಹಾಗೂ ಶಾಂತಿ ಪಿಂಟೋ ದಂಪತಿ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.)ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಮಣಿಪಾಲ ಜ್ಞಾನಸುಧಾ ಪ್ರಾಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!